Thu,Dec11,2025
ಕನ್ನಡ / English

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ: ಯತ್ನಾಳ್ ವಿದಾತ್ಮಕ ಹೇಳಿಕೆ | JANATA NEWS

25 Jun 2023

ಬೆಳಗಾವಿ : ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಬೆಳಗಾವಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಯತ್ನಾಳ್, ವಿಧಾನಸಭೆ ಚುನಾವಣೆಯಲ್ಲಿ ಏನಾಗಿದೆ ಎಲ್ಲರಿಗೂ ಗೊತ್ತು.ಯಾರು ಯಾರನ್ನ ಸೋಲಿಸಲು ಯತ್ನಿಸಿದ್ದಾರೆ ಅಂತಾ ಕಾರ್ಯಕರ್ತರಿಗೆ ಗೊತ್ತಿದೆ. ಕಾರ್ಯಕರ್ತರ ಭಾವನೆಯನ್ನ ಕೇಳದಿದ್ರೇ ಇದೇ ಗತಿ ಆಗೋದು.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ತಾಸು ಕುಳಿತು ಸಭೆ ಮಾಡಿ ಎಂದು ಸಲಹೆ ನೀಡಿದರು.

ಈ ಸರ್ಕಾರ ಐದು ವರ್ಷ ನಡೆಯುವ ಸರ್ಕಾರ ಅಲ್ಲ ಲೋಕಸಭಾ ಚುನಾವಣೆ ಮುನ್ನ ಅಥವಾ ಬಳಿಕ ಅಕ್ಸಿಡೆಂಟ್ ಆಗುತ್ತದೆ . ಅಷ್ಟರಲ್ಲಿ ಇಬ್ಬರೂ ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ತಾರೆ ಅಂತ ಹೇಳಿದರು. ಇನ್ನೂ ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ದೇಶದಲ್ಲಿ ಸಮಾನ ನಾಗರಿಕ ಕಾಯ್ದೆ ಜಾರಿಯಾಗಲಿದೆ ಅಂತ ಅವರು ತಿಳಿಸಿದರು.

ಎಲ್ಲರೂ ಒಗ್ಗಟ್ಟಾಗಿ ಕೆಲಸಮಾಡಿ, ಇಲ್ಲದಿದ್ದರೆ ಪಕ್ಷದಿಂದ ಹೊರ ನಡೆಯಿರಿ. ನಾವ್ಯಾರು ಜಗಳ ಮಾಡಿತ್ತಿಲ್ಲ, ಪಕ್ಷ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ. ಮುಂದಿನ 3 ತಿಂಗಳಲ್ಲಿ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಬಣ್ಣ ಬಯಲಾಗಲಿದೆ.

ಸಿದ್ದರಾಮಯ್ಯನವರು ಏನ್ ಹೇಳಿದ್ರು ಎನ್ನುವುದನ್ನು ಹೊರತೆಗೆಯುತ್ತೇವೆ. ನಾವು ದನ ಕಾಯುತ್ತಿಲ್ಲ, ಆರ್ಥಿಕ ಸ್ಥಿತಿಗತಿ ಬಗ್ಗೆ ಗೊತ್ತಿದೆ. ಇದು ಐದು ವರ್ಷ ನಡೆಯುವ ಸರ್ಕಾರ ಅಲ್ಲ. ಲೋಕಸಭಾ ಚುನಾವಣೆ ಮುನ್ನ, ಇಲ್ಲ ಆದ ಬಳಿಕ ಆಕ್ಸಿಡೆಂಟ್ ಆಗುತ್ತೆ. ಅಷ್ಟರಲ್ಲಿ ಇಬ್ಬರು (ಸಿದ್ದರಾಮಯ್ಯ- ಡಿಕೆ ಶಿವಕುಮಾರ್) ಮೆಟ್ಟು ಮೆಟ್ಟಿನಿಂದ ಹೊಡೆದಾಡಿಕೊಳ್ಳುತ್ತಾರೆ ಎಂದರು.

ಗ್ಯಾರಂಟಿ ಎಲ್ಲವೂ ಮುಗಿತು ಇವರಿಗೆ ಗ್ಯಾರಂಟಿ ಕೊಡೊಕೆ ಸಾಧ್ಯವಿಲ್ಲ.ಈಗ ಹೇಗೆ ಒದ್ದಾಡುತ್ತಿದ್ದಾರೆ ಎಲ್ಲರೂ.ಯಾವ ಸರ್ಕಾರ ಬಂದರೂ ಇದು ಮಾಡಲು ಆಗುವುದಿಲ್ಲ.ಹಾಗಿದ್ದಿದ್ರೇ ಬೊಮ್ಮಾಯಿ ಅವರು ಕೊಡುತ್ತಿದ್ದರು. ಒಂದು ರೀತಿ ಕರ್ನಾಟಕದಲ್ಲಿ ಅರಾಜಕತೆ ಶುರುವಾಗಿದೆ. ಪಾಕಿಸ್ತಾನದ ಧ್ವಜ ಹಾರಾಡುತ್ತಿವೆ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆಗುತ್ತಿವೆ‌.ನಾವು ಎಲ್ಲದಕ್ಕೂ ತಯಾರಾಗಬೇಕು ಇಲ್ಲವಾದರೆ ಮನೆಗೆ ಬಂದು ಹೊಡೆಯುತ್ತಾರೆ ಎಂದರು.

ಯಡಿಯೂರಪ್ಪ, ಬೊಮ್ಮಾಯಿ ಮನೆಗೆ ಸೌಜನ್ಯ ಭೇಟಿ ಅಂತಾರೆ. ಇವರು ಸೌಜನ್ಯ ಭೇಟಿ ಕೊಡ್ತಿಲ್ಲ ಸೋನಿಯಾ ಗಾಂಧಿಗೆ ಅಂಜಿಸುವ ಕೆಲಸ ಮಾಡ್ತಾರೆ.ಬೊಮ್ಮಾಯಿಯವರೇ ಅವರನ್ನ ನೀವು ಮನೆ ವರೆಗೂ ಬಿಟ್ಟುಕೊಳ್ಳಬೇಡಿ.ನಾವು ವಿರೋಧ ಪಕ್ಷದವರ ಮನೆಗೆ ಹೋಗುವುದಿಲ್ಲ ಅಂತಾರೆ‌.ಅದೇ ರೀತಿ ನಾವು ಅವರ ಮನೆಗೆ ಹೋಗುವುದಿಲ್ಲಾ ಅಂತಾ ಹೇಳಿ.ಅವರನ್ನ ಸ್ವಾಗತಿಸಿಕೊಂಡರೆ ನಮ್ಮ ಕಾರ್ಯಕರ್ತರು ಮಲಗಿ ಬಿಡುತ್ತಾರೆ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಿ ಹಲಕಟಗಿರಿ ಮಾಡೊದಿದ್ರೇ ಅಲ್ಲಿಗೆ ಹೋಗಿ ಎಂದು ಕಿಡಿ ಕಾರಿದರು.

ನಾವು ಯಾರು ಜಗಳ ಮಾಡುತ್ತಿಲ್ಲ, ಪಾರ್ಟಿ ನಿರ್ಣಯ ಮಾಡಿದವರ ಪರ ಕೆಲಸ ಮಾಡಿ.ಮೂರು ತಿಂಗಳಲ್ಲಿ ಗ್ಯಾರಂಟಿ ಬಣ್ಣ ಬಯಲು ಆಗಲಿದೆ. ಸಿದ್ದರಾಮಯ್ಯನವರು ಎನ್ ಹೇಳಿದರು ಅದನ್ನ ಹೊರ ತೆಗೆಯುತ್ತೇವೆ. ನಾವು ಗಟ್ಟಿ ಇದ್ದೇವೆ, ದನ ಕಾಯುತ್ತಿಲ್ಲ, ಆರ್ಥಿಕತೆ ಬಗ್ಗೆಯೂ ಗೊತ್ತಿದೆ ಎಂದರು.

RELATED TOPICS:
English summary :Siddaramaiah, DK Sivakumar fight each other: Yatnal scholarly statement

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...