Mon,May20,2024
ಕನ್ನಡ / English

ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ, ನಾನು ಎಲ್ಲೋ ಕುರಿ ಕಾಯುತ್ತಾ ಇರಬೇಕಾಗಿತ್ತು! | JANATA NEWS

26 Jun 2023
1098

ಬೆಂಗಳೂರು : ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನೂತನ ಶಾಸಕರಿಗೆ ಹಮ್ಮಿಕೊಂಡಿರುವ ತರಬೇತಿ ಶಿಬಿರದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಾ, ಪ್ರತಿಯೊಬ್ಬರೂ ಸದನ ನಡೆಯುವಾಗ ನಿಯಮಾವಳಿ ತಪ್ಪದೇ ಓದಬೇಕು. ಅಸೆಂಬ್ಲಿಯನ್ನು ದೇಗುಲ ಎನ್ನುತ್ತೇವೆ. ಜನರ ಜತೆ ಚೆನ್ನಾಗಿದ್ದು, ಅವರ ಸಮಸ್ಯೆಯನ್ನು ಸದನದಲ್ಲಿ ಚರ್ಚಿಸಬೇಕು.

16ನೇ ವಿಧಾನಸಭೆಗೆ ನೂತನವಾಗಿ ಆಯ್ಕೆಯಾದ ಶಾಸಕರುಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾರು ಸಂವಿಧಾನವನ್ನು ಓದಿ ಅರ್ಥ ಮಾಡಿಕೊಳ್ಳುವುದಿಲ್ಲವೋ ಅವರು ಉತ್ತಮ ಶಾಸಕರಾಗಲು, ಸಂಸದರಾಗಲು ಸಾಧ್ಯವಿಲ್ಲ. ಆದ್ದರಿಂದ ಮೊದಲು ಸಂವಿಧಾನವನ್ನು ಓದಿ ಅದರ ಮೂಲಭೂತ ತತ್ವ ಮತ್ತು ಉದ್ದೇಶಗಳನ್ನು ಅರಿತುಕೊಳ್ಳಿ ಎಂದರು.

ನಾನು ಕಾಂಗ್ರೆಸ್ ಮುಖ್ಯಮಂತ್ರಿಯಲ್ಲ, ರಾಜ್ಯಕ್ಕೆ ಮುಖ್ಯಮಂತ್ರಿ. ಮತ ಹಾಕದವರಿಗೂ ಮುಖ್ಯಮಂತ್ರಿ. ಈ ಭಾವನೆ ನಮ್ಮಲ್ಲಿರಬೇಕು. ಸಂವಿಧಾನವನ್ನು ಎಲ್ಲರೂ ತಿಳಿದುಕೊಳ್ಳಿ, ಇಲ್ಲದೇ ಹೋದರೆ ಒಳ್ಳೆಯ ಸಂಸದೀಯ ಪಟುವಾಗಲು ಸಾಧ್ಯವಿಲ್ಲ ಎಂದರು.

ಸದನದ ನಿಯಮಾವಳಿಗಳನ್ನು ನಾವೇ ಮಾಡಿದ್ದೇವೆ. ಅದನ್ನು ಸರಿಯಾಗಿ ಓದಿ ಅರ್ಥ ಮಾಡಿಕೊಂಡರೆ ಜನರ ಸಮಸ್ಯೆಗಳನ್ನು ನಿಯಮ ಬದ್ಧವಾಗಿ ಸದನದ ಮುಂದೆ ಮಂಡಿಸಬಹುದು. ಸಂವಿಧಾನಕ್ಕೆ ವಿರುದ್ಧವಾದ ಕಾನೂನು-ಕಾಯ್ದೆಗಳನ್ನು ಮಾಡಲು ಸಾಧ್ಯವಿಲ್ಲ. ಆದ್ದರಿಂದ ಸಂವಿಧಾನದ ಓದು ಅತ್ಯಗತ್ಯ ಎಂದರು.

ರಾಜಕಾರಣ ಇರುವುದು ಜನ ಸೇವೆಗಾಗಿಯೇ ಹೊರತು, ಧಿಮಾಕು ತೋರಿಸಲು ಅಲ್ಲ‌. ರಾಜಕಾರಣಿ ಜನ ಸೇವಕ. ಇದು ಮನಸ್ಸಿನಲ್ಲಿ ಇಲ್ಲದಿದ್ದರೆ ಮಾತ್ರ ಸಾರ್ವಜನಿಕ ಕ್ಷೇತ್ರದಲ್ಲಿ ಉಳಿಯಲು ಸಾಧ್ಯ. ಒಂದು ಬಾರಿಯಾದರೂ ವಿಧಾನಸೌಧದ ಮೆಟ್ಟಿಲು ಹತ್ತಬೇಕು ಎನ್ನುವವರು, ಹತ್ತಿದ ಮೇಲೆ ಒಳಗೆ ಬರುವುದಿಲ್ಲ. ‌ಈ ಆಟಿಟ್ಯೂಡ್ ಬಿಡಬೇಕು. ಅಧಿವೇಶನ ನಡೆಯುವಾಗ ಶಾಸಕರು ವಿಧಾನಸಭೆಯಲ್ಲಿ ಇರಬೇಕು.

ಅಧಿವೇಶನ ನಡೆಯುವಾಗ ಜನರನ್ನು ಭೇಟಿ ಮಾಡುವುದು, ಸಚಿವರು, ಅಧಿಕಾರಿಗಳನ್ನು ಭೇಟಿ ಮಾಡುವುದನ್ನು ಬಿಡಬೇಕು. ಕ್ಷೇತ್ರದ ಜನರನ್ನು ನೋಡಬೇಕು, ಅಧಿಕಾರಿಗಳನ್ನು ನೋಡಬೇಕೆಂದು ಕೆಲವರು ಅರ್ಧದಿಂದಲೇ ಹೊರಟು ಬಿಡುತ್ತಾರೆ. ಕೆಲವು ಸಚಿವರೇ ಸದನಕ್ಕೆ ಬರುವುದಿಲ್ಲ. ಅಲ್ಲಿಗೆ ಬಂದರೆ ಹಿರಿಯರ ಮಾತು, ಸಂಸದೀಯ ಭಾಷೆ ಅರ್ಥವಾಗುತ್ತದೆ. ನಾವು ತಜ್ಞರಲ್ಲ, ಸತ್ವಜ್ಞರಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ನಾನು, ನನ್ನಂಥವರು ಶಾಸಕರಾಗಲು, ಮುಖ್ಯಮಂತ್ರಿ ಆಗಲು ಡಾ.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಕಾರಣ. ಸಂವಿಧಾನ ಇಲ್ಲದಿದ್ದರೆ ಸಿ.ಟಿ.ರವಿ, ಕೆ.ಎಸ್.ಈಶ್ವರಪ್ಪ, ನಾನು ಎಲ್ಲೋ ಕುರಿ, ಹಸು ಕಾಯುತ್ತಾ ಇರಬೇಕಾಗಿತ್ತು ಎಂದರು. ಈಗ ಚುನಾವಣೆ ದುಬಾರಿಯಾಗುತ್ತಿದೆ. ಅರ್ಹರು, ಪ್ರಾಮಾಣಿಕರು ಶಾಸಕರಾಗುವುದು ವಿರಳ. ಕೆಲವು ಬಾರಿ ಜನಪರ ಕಾಳಜಿ ಇಲ್ಲದವರು ಗೆದ್ದು ಬರುತ್ತಾರೆ. ಅಂತವರು ಎರಡನೇ ಬಾರಿ ಗೆಲ್ಲುವುದು ಕಷ್ಟವಾಗುತ್ತದೆ. ಜನರ ಪರ ಕೆಲಸ ಮಾಡುವವರು ರಾಜಕಾರಣದಲ್ಲಿ ಉಳಿಯುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.

RELATED TOPICS:
English summary :Without the constitution, CT Ravi, Eshwarappa, I would have to be herding sheep somewhere!

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...