Tue,May21,2024
ಕನ್ನಡ / English

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ! | JANATA NEWS

27 Jun 2023
1307

ಬೆಂಗಳೂರು : ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು.

ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ಥ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಅಶ್ವತ್ಥ ನಾರಾಯಣ್​ಗೆ ತಿರುಗೇಟು ನೀಡಿದರು.

ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ ಆರಂಭಿಸಿದೆ. ತಮಿಳುನಾಡಿನ ಗಡಿ ಭಾಗ ಸಂಗಮದ ಬಳಿ ಕೆಂಪೇಗೌಡರ ಕೋಟೆ ಇದೆ. ಅದರ ಅಭಿವೃದ್ಧಿ ಕಾರ್ಯ ನಡೆಯುತ್ತಿದೆ. ಆ ಕೋಟೆ ಸಮೀಪ ಅಕ್ಕಪಕ್ಕದಲ್ಲಿ ನಿಜಲಿಂಗಪ್ಪ ಹಾಗೂ ವೀರೇಂದ್ರ ಪಾಟೀಲ್ ಮನೆ ಇದೆ. ಅಲ್ಲೇ ಹತ್ತಿರದಲ್ಲಿ ನನ್ನ ತಂದೆ ದೊಡ್ಡಹಾಲಹಳ್ಳಿ ಕೆಂಪೇಗೌಡರ ನಿವಾಸ ಇದೆ. ಇತ್ತೀಚೆಗೆ ಅದನ್ನು ಮಾರಿದ್ದೇನೆ. ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದು ತಿಳಿಸಿದರು.

ಇದು ನನಗೂ ಕೆಂಪೇಗೌಡ ಕಟ್ಟಿದ ಬೆಂಗಳೂರಿಗೆ ಇರುವ ಸಂಬಂಧ ಎಂದರು. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಇಂದು ನಾವು ಬೆಂಗಳೂರಿನ ಅಭಿವೃದ್ಧಿ ವಿಚಾರದಲ್ಲಿ ಮೂವರು ಮಹನೀಯರನ್ನು ಸ್ಮರಿಸಬೇಕು ಅದು ಕೆಂಪೇಗೌಡ, ಕೆಂಗಲ್ ಹನುಮಂತಯ್ಯ ಹಾಗೂ ಎಸ್.ಎಂ ಕೃಷ್ಣ. ಇವರು ಕಟ್ಟಿರುವ ಬೆಂಗಳೂರನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕು. ಕೆಂಪೇಗೌಡರ ಸ್ಥಂಭ ಹೇಗೆ ಸ್ಮಾರಕವಾಗಿದೆಯೋ ಅದೇ ರೀತಿ ನಾವು ನಮ್ಮ ಕೆಲಸಗಳ ಮೂಲಕ ಸಾಕ್ಷಿಗುಡ್ಡೆ ನಿರ್ಮಿಸಬೇಕು ಎಂದರು.

ಬೆಂಗಳೂರು ಕೆಲವು ಭಾಗಗಳು ಮಾತ್ರ ಯೋಜಿತ ನಗರವಾಗಿದ್ದು, ಉಳಿದ ಭಾಗಗಳು ಯೋಜನೆ ರಹಿತವಾಗಿ ಬೆಳೆದುಕೊಂಡಿದೆ. ಇಲ್ಲಿನ ಹವಾಮಾನದಲ್ಲಿ ಬದುಕಿದವರು ಇದನ್ನು ಬಿಟ್ಟು ಹೋಗುವುದಿಲ್ಲ. ಈ ಬೆಂಗಳೂರು ನೆಲದಲ್ಲಿ ಕೆಂಪೇಗೌಡ, ಕೆಂಗಲ್ ಹನುಮಂತಯ್ಯ, ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮಿ ಹುಟ್ಟಿದ್ದಾರೆ. ಇದು ಈ ನೆಲದ ವೈಶಿಷ್ಟ್ಯತೆ. ಇದನ್ನು ಧರ್ಮವಾಗಿ, ಅಭಿವೃದ್ಧಿ ಹಾಗೂ ಪ್ರಗತಿಯಾಗಿದೆ ಉಳಿಸಿಕೊಂಡು ಹೋಗಬೇಕು. ಹೀಗಾಗಿ ಈ ಬೆಂಗಳೂರು ಅಭಿವೃದ್ಧಿ ಮಾಡಬೇಕು. ನಾನು ಬಹಳ ಉತ್ಸುಕತೆಯಿಂದ ಬೆಂಗಳೂರು ನಗರದ ಜವಾಬ್ದಾರಿ ಹೊತ್ತುಕೊಂಡಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ಡಿ.ಕೆ. ಶಿವಕುಮಾರ್ ಅವರ ಬಳಿಕ ಮಾತನಾಡಿದ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ʻʻನಾನು ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಲು ಒಂದು ಕಾರಣವಿದೆ. ಅವರು ನನಗೂ ರಾಮನಗರಕ್ಕೂ ಏನು ಸಂಬಂಧ ಅಂತ ಪ್ರಶ್ನೆ ಮಾಡಿದ್ರು.

ಯಾವ ಸರ್ಕಾರ ಕೂಡ ಕೊಡದಷ್ಟು ಯೋಜನೆಗಳನ್ನು ನಾವು ರಾಮನಗರಕ್ಕೆ ಕೊಟ್ಟಿದ್ದೇವೆ. ರಾಮನಗರ ಅಭಿವೃದ್ಧಿ ಮಾಡಿದ್ದೇವೆ. ಕೆಂಪಾಂಬುದಿಯಲ್ಲಿ ಇವರು ಘೋಷಣೆ ಮಾತ್ರ ಮಾಡಿದರು. ಆದರೆ ನಾವು ಅಭಿವೃದ್ಧಿ ಮಾಡಿದ್ದೇವೆʼʼ ಎಂದರು.

ಬಳಿಕ ಆದಿಚುಂಚನಗಿರಿ ಮಠ ಸಂಸ್ಥಾನದ ನಿರ್ಮಲಾನಂದನಾಥ ಶ್ರೀಗಳು ದ್ಚೇಷ ಬೆಳೆಸಿಕೊಳ್ಳದಂತೆ ಸಂದೇಶ ನೀಡಿದರು. ಪರಸ್ಪರ ದ್ವೇಷ ಬೇಡ, ಜಟಾಪಟಿ ಬೇಡ. ಅಭಿವೃದ್ಧಿಗೆ ಪರಸ್ಪರ ಸಹಕಾರ ಇರಲಿ ಎಂದು ನಿರ್ಮಲಾನಂದನಾಥ ಸ್ವಾಮೀಜಿಗೆ ಇಬ್ಬರಿಗೂ ಸಲಹೆ ನೀಡಿದರು. ಇಬ್ಬರೂ ದ್ವೇಷ ಬೆಳೆಸಿಕೊಳ್ಳಬೇಡಿ ಎಂದು ಮನವಿ ಮಾಡಿದರು.

RELATED TOPICS:
English summary :Ashwath Narayan does not know about the relationship between me and Bangalore

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...