ಮದುವೆಯಾಗುವುದಾಗಿ ನಂಬಿಸಿ ಹೋಟೆಲ್ ನಲ್ಲಿ 20 ದಿನ ದೇಹ ಸಂಪರ್ಕ: ಆರೋಪಿ ಬಂಧನ | JANATA NEWS

ಮಂಗಳೂರು : ವಿವಾಹವಾಗುವುದಾಗಿ ನಂಬಿಸಿ ಮಹಿಳೆಯೊಂದಿಗೆ ನಿರಂತರ ದೈಹಿಕ ಸಂಬಂಧ ಬೆಳೆಸಿ ವಂಚಿಸಿದ ಆರೋಪದ ಮೇಲೆ ಕಡಬ ನಿವಾಸಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಸಂತ್ರಸ್ತೆ ಮಂಗಳೂರು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಅನ್ವಯ ಆರೋಪಿ ಕಡಬ ಮೂಲದ ಅನೀಶ್ ರೆಹಮಾನ್ ಎಂಬಾತನನ್ನು ಬಂಧಿಸಿ ಜೂನ್ 27 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಅನೀಶ್ ರೆಹಮಾನ್ ತನ್ನನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕಿಸಿದ್ದ. ನಂತರ ಇಬ್ಬರೂ ಪ್ರೀತಿಸುತ್ತಿದ್ದ ನಾಟಕವಾದ್ದ, ಆರೋಪಿಯು ಮದುವೆಯಾಗುವುದಾಗಿ ಭರವಸೆ ನೀಡಿ ನಗರದ ಖಾಸಗಿ ಲಾಡ್ಜ್‌ಗೆ ಕರೆದೊಯ್ದಿದ್ದ. 20 ದಿನಗಳ ಕಾಲ ನಿರಂತರವಾಗಿ ದೈಹಿಕ ಸಂಬಂಧ ಹೊಂದಿದ್ದ ಎಂದು ಆರೋಪಿಸಿ 24 ವರ್ಷದ ಸಂತ್ರಸ್ತ ಮಹಿಳೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಜೂನ್ 26 ರಂದು ಲಿಖಿತ ದೂರು ದಾಖಲಿಸಿದ್ದರು.
ನಂತರ ಆರೋಪಿಗೆ ಈಗಾಗಲೇ ಮದುವೆಯಾಗಿರುವುದು ಸಂತ್ರಸ್ತೆಗೆ ತಿಳಿದು ಬಂದಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ಆರೋಪಿ ರೆಹಮಾನ್ ಈ ಹಿಂದೆ ಗಾಂಜಾ ಸೇವನೆ ಕೇಸ್ನಲ್ಲಿ ಬಂಧಿತನಾಗಿದ್ದ. ಆರೋಪಿ ಅನೀಶ್ ರೆಹಮಾನ್ ವಿರುದ್ಧ ಕಾವೂರು ಠಾಣೆಯಲ್ಲಿ NDPS ಅಡಿಯಲ್ಲೂ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.