Sun,Oct26,2025
ಕನ್ನಡ / English

ರಾಜ್ಯದಲ್ಲಿ ಭಾರಿ ಮಳೆ, ಜಾಗತಿಕ ಮಟ್ಟದಲ್ಲಿ ದೊಡ್ಡ ದುರಂತ, ಕೋಡಿಮಠ ಶ್ರೀ ಭವಿಷ್ಯ | JANATA NEWS

01 Jul 2023

ಹುಬ್ಬಳ್ಳಿ : ಪ್ರಕೃತಿ ಮಾತೆ ಮುನಿದಿದ್ದು ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಿ ಜಲಪ್ರಳಯವೇ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರಕ್ಕೆ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂದು ಚುನಾವಣಾಪೂರ್ವದಲ್ಲಿ ಭವಿಷ್ಯ ನುಡಿದಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಇದೀಗ ಸ್ಫೋಟಕ ಭವಿಷ್ಯವೊಂದನ್ನು ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಪಕ್ಷದ ಸರ್ಕಾರ ಬರಲಿದೆ, ಸ್ಥಿರ ಸರ್ಕಾರ ರಚನೆಯಾಗಲಿದೆ ಎಂಬುದಾಗಿ ಹೇಳಿದ್ದೆ. ಅದು ನಿಜ ಆಗಿದೆ. ಈ ಬಾರಿ ರಾಜ್ಯದಲ್ಲಿ ಸಾಕಷ್ಟು ಮಳೆ ಬರಲಿದೆ. ಜಲಪ್ರಳಯ ಆಗುವ ಲಕ್ಷಣ ಇದೆ ಎಂದು ಭವಿಷ್ಯ ನುಡಿದಿದ್ದಾರೆ.

ಜಾಗತಿಕವಾಗಿ ಮೂರು ಗಂಡಾಂತರ ಕಾದಿದೆ. ಒಂದೆರಡು ರಾಷ್ಟ್ರಗಳು ಮುಚ್ಚಿ ಹೋಗಲಿವೆ. ಜನರು ಅಕಾಲಿಕ ಮೃತ್ಯುವಿಗೆ ಸಿಲುಕುವ ಸೂಚನೆ ಇದೆ. ವಿಜಯ ದಶಮಿಯಿಂದ ಸಂಕ್ರಾಂತಿಯವರೆಗೆ ಈ ದುರ್ಘಟನೆಗಳು ನಡೆಯುತ್ತವೆ ಎಂದು ಶ್ರೀಗಳು ಹೇಳಿದರು. ಆಳುವವರು ಈಗಾಗಲೇ ಮುಂದಾಗುವ ಗಂಡಾಂತರ ಅರಿತರೇ ಪಾರಾಗಬಹುದು. ಇಲ್ಲದೇ ಹೋದಲ್ಲಿ ದುರ್ಘಟನೆ ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

ಕರುನಾಡಿಗೆ ಕೆಲವೊಂದು ಆಪತ್ತು ಇದೆ.‌ ಕೆಲವು ಸಾವು ನೋವುಗಳು ಸಂಭವಿಸುತ್ತದೆ. ಈ ವೇಳೆ ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ಒಂದು ದುರ್ಘಟನೆ ಆಗುತ್ತದೆ. ಅದನ್ನು ತಪ್ಪಿಸುವುದು ಆಳುವವರ ಕೈಯಲ್ಲಿದೆ. ಇದರಿಂದ ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳುತ್ತಾರೆ ಎಂದು ಹೇಳಿದರು.

ಜಗತ್ತಿನ ಸಾಮ್ರಾಟರು ತಲ್ಲಣಗೊಳ್ಳಲಿದ್ದಾರೆ. ಬಡವರಿಗೆ ಗ್ಯಾರಂಟಿ ಒಳ್ಳೆಯದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂಥ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬರುವಂತಾಗಿದೆ ಎಂದು ಅವರು ಹೇಳಿದ್ದಾರೆ.

ಇನ್ನು ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರವಾಗಿ ಕೋಡಿಮಠದ ಶ್ರೀಗಳು, 'ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ. ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ' ಎಂದಿದ್ದಾರೆ.

RELATED TOPICS:
English summary :Heavy rains in the state, big disaster at the global level, Kodimath shree

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...