ವಡ್ಡರಹಳ್ಳಿ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ, ಗಾಯಾಳುಗಳಿಗೆ 50ಸಾವಿರ! | JANATA NEWS

ಬಳ್ಳಾರಿ : ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ಶುಕ್ರವಾರ ನಡೆದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರವನ್ನು ಸರ್ಕಾರದ ವತಿಯಿಂದ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಬಳ್ಳಾರಿಯ ಟ್ರಾಮಾ ಕೇರ್ ಸೆಂಟರ್ ಭೇಟಿ ನೀಡಿದ ಜಮೀರ್ ಅಹ್ಮದ್ ಗಾಯಾಳುಗಳ ಆರೋಗ್ಯವನ್ನು ವಿಚಾರಿಸಿದ್ದಾರೆ. ಅಲ್ಲದೆ ವಿಮ್ಸ್ ಶವಗಾರ ಮತ್ತು ಮೃತರ ಮನೆಗೆ ಕೂಡ ಜಮೀರ್ ಭೇಟಿ ನೀಡಿ ಕುಟುಂಬಕ್ಕೆ ಧೃತಿಗೆಡದಂತೆ ಧೈರ್ಯ ತುಂಬಿದರು.
ನಂತರ ಮಾತನಾಡಿ ಮುಸ್ಲಿಮರಲ್ಲಿ ಬಕ್ರಿದ್ ಬಳಿಕ ಬಾಸಿ ಖುತ್ಬ ಎನ್ನುವ ಆಚರಣೆ ಮಾಡುತ್ತೇವೆ. ಹಬ್ಬದಾಚರಣೆ ಮಾಡಲು ಕೌಲಬಜಾರನ 19 ಮಂದಿ ಎರಡು ಆಟೋ ಮೂಲಕ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು, 9 ಜನರು ಸಾವನ್ನಪ್ಪಿದ್ದಾರೆ. ಸರ್ಕಾರದ ವತಿಯಿಂದ ಮೃತರ ಕುಟುಂಬಕ್ಕೆ ಎರಡು ಲಕ್ಷ ಪರಿಹಾರ ನೀಡಲಾಗ್ತದೆ ಎಂದರು. ಗಾಯಾಳುಗಳಿಗೆ 50 ಸಾವಿರ ಹಣ ನೀಡಲಾಗುತ್ತದೆ. ಅಲ್ಲದೇ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸುತ್ತದೆ ಎಂದರು.