Sun,Oct26,2025
ಕನ್ನಡ / English

ಹಿಂದೂ ಎಂಬುದು ಧರ್ಮವೇ ಅಲ್ಲ, ಲಿಂಗಾಯತವನ್ನು ಸ್ವತಂತ್ರ ಧರ್ಮವೆಂದು ಪರಿಗಣಿಸಿ: ತೋಂಟದಾರ್ಯ ಸಿದ್ದರಾಮ ಸ್ವಾಮೀಜಿ | JANATA NEWS

09 Jul 2023

ಧಾರವಾಡ : ನಾವು ಹಿಂದೂ ವಿರೋಧಿಗಳಲ್ಲ, ಹಿಂದೂ ಎನ್ನುವುದು ಒಂದು ಧರ್ಮವೇ ಅಲ್ಲ ಎಂದು ಗದಗ ತೋಂಟದಾರ್ಯ ಮಠದ ಡಾ. ಸಿದ್ದರಾಮ ಸ್ವಾಮೀಜಿ ಹೇಳಿದ್ದಾರೆ.

ಧಾರವಾಡದಲ್ಲಿ ಮಾತನಾಡಿದ ಅವರು, ಹಿಂದೂ ಜೀವನ ಪದ್ಧತಿಯಷ್ಟೇ. ಓರ್ವ ಸ್ಥಾಪಕ ಇದ್ದರೆ ಮಾತ್ರ ಅದೊಂದು ಧರ್ಮ ಎನಿಸಿಕೊಳ್ಳುತ್ತದೆ. ಧರ್ಮ ಎಂದರೆ ಅದರದ್ದೆಯಾದ ಸಂವಿಧಾನ ಇರಬೇಕು. ಒಂದೇ ದೇವರನ್ನು ಪೂಜಿಸುತ್ತಿರಬೇಕು. ಈ ಹಿನ್ನೆಲೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮವಾಗಿದೆ. ಬಸವಣ್ಣನವರು ಇದರ ಸ್ಥಾಪಕರು ಎಂದಿದ್ದಾರೆ.

ಲಿಂಗಾಯತ ಅನ್ನೋದು ಒಂದು ಸ್ವತಂತ್ರ ಧರ್ಮ. ಇದಕ್ಕೆ ಬಸವಣ್ಣನವರು ಸಂಸ್ಥಾಪಕರು. ವಚನ ಸಾಹಿತ್ಯ ಇದರ ಸಂವಿಧಾನ. ನಾವೆಲ್ಲರೂ ಇಷ್ಟ ಲಿಂಗವನ್ನು ಪೂಜಿಸುವಂತಹವರು. ಇದು ಬಹಳ ಮುಖ್ಯ. ಹಿಂದೂ ಧರ್ಮ ಅಂತ ನಾವೇನು ಹೇಳುತ್ತೇವೋ ಅಲ್ಲಿ ಯಾವುದೇ ಪ್ರವರ್ತಕ, ಪ್ರವಾದಿ ಇಲ್ಲ. ಅದಕ್ಕೊಂದು ನಿರ್ದಿಷ್ಟ ಗ್ರಂಥ ಆಗಲಿ, ದೇವರಾಗಲಿ ಇಲ್ಲ. 33 ಕೋಟಿ ದೇವತೆಗಳನ್ನು ಪೂಜಿಸುತ್ತಾರೆ. ಅದು ವೈಧಿಕ ಧರ್ಮ. ಅದನ್ನೇ ಇವತ್ತು ಹಿಂದೂ ಧರ್ಮ ಅಂತ ಪರಿವರ್ತನೆ ಮಾಡಿಕೊಂಡಿದ್ದಾರೆ ಎಂದರು.

ಇವತ್ತು ಭಗವದ್ಗೀತೆಯ ಬಗ್ಗೆ ಅವರು ಮಾತನಾಡುತ್ತಾರೆ. ಆದರೆ ಭಗವದ್ಗೀತೆಯ 18 ಅಧ್ಯಾಯದ ಯಾವ ಒಂದು ಶ್ಲೋಕದಲ್ಲೂ ಹಿಂದೂ ಎಂಬ ಶಬ್ಧ ಪ್ರಯೋಗ ಆಗಿಲ್ಲ. ಜೊತೆಗೆ ವೇದಗಳಲ್ಲಿ, ಉಪನಿಷತ್​ಗಳಲ್ಲೂ ಪ್ರಯೋಗ ಆಗಿಲ್ಲ. ಅದೊಂದು ಜೀವನ ಮಾರ್ಗ. ಹಾಗಾಗಿ ನಾವು ಸ್ವತಂತ್ರ ಧರ್ಮದ ಮಾನ್ಯತೆಯನ್ನು ಪಡೆಯುವುದರಿಂದ ಹಿಂದೂ ಧರ್ಮದ ವಿರೋಧಿಗಳು ಆಗುವುದಿಲ್ಲ ಎಂದು ತಿಳಿಸಿದರು.

ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮವೆಂದು ಮಾನ್ಯತೆ ಸಿಗಬೇಕು. ಈ ಸಂಬಂಧ ರಾಜ್ಯ ಸರ್ಕಾರ ಕೇಂದ್ರಕ್ಕೆ ಪುನಃ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.

RELATED TOPICS:
English summary :Hinduism is not a religion, consider Lingayat as an independent religion: Tondarya Siddarama Swamiji

ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ಭಾರತದ ಸಚಿವರ ಬಲವಾದ ಸಂದೇಶ: ನಮ್ಮ ತಲೆಯ ಮೇಲೆ ಬಂದೂಕು ಹಿಡಿದು ವ್ಯಾಪಾರ ಒಪ್ಪಂದ ಮಾಡಿಕೊಳ್ಳಲ್ಲ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ತಿಂಗಳೊಳಗೆ ಮತ್ತೊಂದು ಸ್ಲೀಪರ್ ಕೋಚ್ ಬಸ್ ಬೆಂಕಿ ದುರಂತ : ಬಾಗಿಲು ಜಾಮ್ ಕಾರಣ 25 ಸಾವು, ಹಲವರಿಗೆ ಗಾಯ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಭಾರತದ ನಾಗರಿಕರಿಗೆ ಪ್ರಧಾನಿ ನರೇಂದ್ರ ಮೋದಿ ಪತ್ರ
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ನಗರದ ರಸ್ತೆ ದುರಸ್ತಿಗೆ ಕಿರಣ್ ಮಜುಂದಾರ್ ಶಾ ಅವರೇ ಮಾಡಲಿ, ತುಂಬಾ ಸಂತೋಷ - ಡಿಸಿಎಂ ಶಿವಕುಮಾರ್
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಇಸ್ಲಾಂ ಧರ್ಮದ ನಂಬಿಕೆಯಿಲ್ಲದವರನ್ನು ಗುರಿಯಾಗಿಸಿ ಎಲ್ಇಟಿಯೊಂದಿಗೆ ಸಂಚು ರೂಪಿಸಿದ್ದ ಕಾರ್ಮಿಕನ ಮೇಲೆ ಎನ್ಐಎ ಆರೋಪಪಟ್ಟಿ
ಸರ್ಕಾರಿ ಸ್ಥಳಗಳಲ್ಲಿ ನಮಾಜ್  ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
ಸರ್ಕಾರಿ ಸ್ಥಳಗಳಲ್ಲಿ ನಮಾಜ್ ಗೆ ಅವಕಾಶ ಕೊಡದಂತೆ ಒತ್ತಾಯಿಸಿ ಶಾಸಕ ಯತ್ನಾಳ್ ಸಿಎಂ ಗೆ ಪತ್ರ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
33 ಸಾವಿರ ಕೋಟಿ ಬಿಲ್‌ ಬಾಕಿ ತೆರವು ಗೊಳಿಸಲು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಒತ್ತಾಯ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಪಂಜಾಬ್‌ ಡಿಐಜಿ ಬಂಧಿಸಿದ ಸಿಬಿಐ : ಹಿರಿಯ ಐಪಿಎಸ್ ಅಧಿಕಾರಿ ಮನೆಯಲ್ಲಿ ಕಂತೆ ಕಂತೆ ಹಣದ ಹೊಳೆ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ಕನ್ನಡ ಬಿಗ್ ಬಾಸ್ ಮನೆಗೆ ಬೀಗ : ರಾಜ್ಯ ಸರ್ಕಾರ ಸ್ಯಾಂಡಲ್ ವುಡ್ ನಟ್ಟು-ಬೋಲ್ಟ್ ಟೈಟ್ ಮಾಡುತ್ತಿದೆ ಎಂದು ಪ್ರತಿಪಕ್ಷದ ವಾಗ್ದಾಳಿ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ವಿಷ್ಣು ವಿಗ್ರಹ ಪ್ರಕರಣದಲ್ಲಿ ಸಿಜೆಐ ವಿವಾದಾತ್ಮಕ ಹೇಳಿಕೆ : ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದ ವಕೀಲ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಧಿಕಾರ ಹಂಚಿಕೆ ಹಗ್ಗಜಗ್ಗಾಟ : ಸಿದ್ದರಾಮಯ್ಯ ಬಳಿಕ ಈಗ ಶಿವಕುಮಾರ್ ಹೇಳಿಕೆ ಬಿಡುಗಡೆ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ
ಅಮೆರಿಕ ಒತ್ತಡಕ್ಕೆ ಮಣಿದು 2008 ರ ಮುಂಬೈ ಭಯೋತ್ಪಾದಕ ದಾಳಿಗೆ ಪ್ರತೀಕಾರ ಕೈಗೊಳ್ಳದ ಯುಪಿಎ ಸರ್ಕಾರ - ಚಿದಂಬರಂ

ನ್ಯೂಸ್ MORE NEWS...