ಹನುಮ ಜಯಂತಿ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತ ಕೊಲೆ | JANATA NEWS
ಮೈಸೂರು : ಜಿಲ್ಲೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ ಮಾಡಲಾಗಿದೆ. ಟಿ.ನರಸೀಪುರ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ವೇಣುಗೋಪಾಲ್ ನಾಯಕ್ (32) ಕೊಲೆಯಾದ ಯುವಕ. ಹನುಮಜಯಂತಿ ವೇಳೆ 2 ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಬಳಿಕ ದುಷ್ಕರ್ಮಿಗಳು ಬಾಟಲಿಯಿಂದ ಇರಿದು ಕೊಲೆ ಮಾಡಲಾಗಿದೆ.
ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆ ಪೊಲೀಸರು ಬಲೆ ಬೀಸಿದ್ದಾರೆ.
English summary :A youth brigade activist was killed during Hanuman Jayanti