Tue,Aug04,2026
ಕನ್ನಡ / English

ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ! | JANATA NEWS

13 Jul 2023

ಚಿತ್ರದುರ್ಗ : ಕಲುಷಿತ ನೀರು ಕುಡಿದು 30 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆಕಕ ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ನಾಗಸಮುದ್ರದಲ್ಲಿ ನಡೆದಿದೆ.

ನಾಗಸಮುದ್ರ ಗ್ರಾಮದಲ್ಲಿ ಕುಡಿಯುವ ನೀರಿನ ಮುಖ್ಯ ಪೈಪ್ ಹೊಡೆದಿದ್ದು, ಅದರೊಳಗೆ ಚರಂಡಿ ನೀರು ಮಿಶ್ರಣವಾಗಿ ಕಲುಷಿತಗೊಂಡಿರುವ ಹಿನ್ನಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಚರಂಡಿ ನೀರು ಮಿಶ್ರಣಗೊಂಡ ಕುಡಿಯುವ ನೀರನ್ನ ಕುಡಿದಂತ 30ಕ್ಕೂ ಹೆಚ್ಚು ಮಂದಿಯಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಅವರನ್ನು ಕೂಡಲೇ ರಾಂಪುರ, ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.

ಚಾಮುಂಡಮ್ಮ, ಓಬಕ್ಕ ಇಬ್ಬರು ಮಹಿಳೆಯರು ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಲಜೀವನ್ ಮಿಷನ್ ಕಾಮಗಾರಿ ವೇಳೆಯಲ್ಲಿ ಹಾನಿಗೊಂಡ ಪೈಕ್ ಮೂಲಕ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಸೇರಿದ್ದೇ ಘಟನೆಗೆ ಕಾರಣ ಎಂಬುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಪೈಪ್ ಹೊಡೆದಿದ್ದರೂ ನಿರ್ಲಕ್ಷ ತೋರಿರುವ ಗ್ರಾ.ಪಂ ಅಧಿಕಾರಿಗಳು. ಅಧಿಕಾರಿಗಳ ನಿರ್ಲಕ್ಷ್ಯದಿಂದ ನಡೆದಿರುವ ದುರಂತವಾಗಿದೆ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆರೋಗ್ಯಾಧಿಕಾರಿ ಡಾ. ಮಧುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :More than 30 people are sick after drinking contaminated water, two are in critical condition!

ಸಿಎಂ ವಿಜಯ್ ಮತ್ತು ನಟಿ ತ್ರಿಶಾ ಕುರಿತ ಹೇಳಿಕೆಗಳ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು : ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ರಾಮಮಂದಿರ ಕುರಿತ ಕಿರುನಾಟಕದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಮತ್ತು ಪಪ್ಪು ಯಾದವ್ ವಿರುದ್ಧ ಎಫ್‌ಐಆರ್ ದಾಖಲು

ಕರ್ನಾಟಕ ರಾಜ್ಯ ಸಂಪುಟಕ್ಕೆ 20 ನೂತನ ಸಚಿವರ ಸೇರ್ಪಡೆ

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

ನ್ಯೂಸ್ MORE NEWS...