ಕಾಲೇಜಿನ 8ನೇ ಮಹಡಿಯಿಂದ ಹಾರಿದ ವಿದ್ಯಾರ್ಥಿ | JANATA NEWS

ಬೆಂಗಳೂರು : ಕಾಲೇಜಿನ 8ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ.
ಮೂಲತಃ ಮಂಗಳೂರಿನ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ಸೆಕೆಂಡ್ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಇವತ್ತು ಕಾಲೇಜಿನಲ್ಲಿ ಪರೀಕ್ಷೆ ಇತ್ತು. ಆದಿತ್ಯ ಪರೀಕ್ಷೆ ವೇಳೆ ಮೊಬೈಲ್ ಬಳಸುತಿದ್ದ ಎಂಬ ಆರೋಪ ಮಾಡಲಾಗಿದೆ. ಈ ಸಂಬಂಧ ಕಾಲೇಜಿನಲ್ಲಿ ಕೌನ್ಸಿಲಿಂಗ್ ಹಾಗೂ ಮೊಬೈಲ್ ಬಳಸುತಿದ್ದ ಕುರಿತಾಗಿ ಆತನ ಕುಟುಂಬಸ್ಥರಿಗೆ ಮಾಹಿತಿ ನೀಡುತ್ತಿರುವ ಈ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.
English summary :A student jumped from the 8th floor of the college