Thu,Dec11,2025
ಕನ್ನಡ / English

ಭೀಮನ ಅಮಾವಾಸ್ಯೆ ದಿನ ಪಾದ ಪೂಜೆ ಮಾಡಿ ಪತಿಯನ್ನು ಬಲಿ ಕೊಟ್ಟ ಪತ್ನಿ | JANATA NEWS

18 Jul 2023

ಬೆಳಗಾವಿ : ಭೀಮನ‌ ಅಮಾವಾಸ್ಯೆ ದಿನದಂದು ಗಂಡನ ಪಾದಪೂಜೆ ಮಾಡಿ ಬಳಿಕ ದೇವಸ್ಥಾನಕ್ಕೆ ಕರೆದೊಯ್ದು ಬಲಿಕೊಟ್ಟಿದ್ದಾಳೆ. ಜಿಲ್ಲೆಯ ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದ ಬನಸಿದ್ದೇಶ್ವರ ದೇವಸ್ಥಾನದಲ್ಲಿ ನಡೆದಿದ್ದ ಭೀಕರ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ.

ಕೊಲೆಯಾದ ಶಂಕರ ಜಗಮುತ್ತಿ ಪತ್ನಿ ಪ್ರಿಯಾಂಕಾ ಜಗಮುತ್ತಿಯನ್ನು ಮೂಡಲಗಿ ಪೊಲೀಸರು ಬಂಧಿಸಿದ್ದಾರೆ. ಮೂಡಲಗಿ ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ನಿನ್ನೆ (ಜು.17) ಹತ್ಯೆ ನಡೆದಿದೆ.

ಕೇವಲ ಐದು ತಿಂಗಳ ಹಿಂದೆ ಅಷ್ಟೇ ಸಪ್ತಪದಿ ತುಳಿದಿದ್ದ ಶಂಕರ್ ಜಗಮುತ್ತಿ(25) ಎನ್ನುವಾತನನ್ನು ಪತ್ನಿ ಕಣ್ಣೆದುರಲ್ಲೇ ವಡೇರಹಟ್ಟಿ ಬಳಿ ದೇವಸ್ಥಾನದ ಆವರಣದಲ್ಲಿ ನಿನ್ನೆ ಭೀಕರ ಹತ್ಯೆ ಮಾಡಲಾಗಿತ್ತು.

ಭೀಮನ‌ ಅಮಾವಾಸ್ಯೆ ಹಿನ್ನೆಲೆ ಗಂಡನ ಪಾದ ಪೂಜೆ ಮಾಡಿ, ಊರ ಹೊರ ವಲಯದ ಬನಸಿದ್ದೇಶ್ವರ ದೇವಸ್ಥಾನಕ್ಕೆ ಗಂಡನನ್ನು ಪ್ರಿಯಾಂಕಾ‌ ಕರೆದುಕೊಂಡು ಬಂದಿದ್ದಳು. ಇದಕ್ಕೂ ಮುನ್ನ ಮನೆ ಬಿಡುವ ವೇಳೆ ಪ್ರಿಯಕರ ಶ್ರೀಧರ್​ಗೆ ಕರೆ ಮಾಡಿ ದೇವಸ್ಥಾನಕ್ಕೆ ಬಂದಿದ್ದಳು.

ಅದರಂತೆ ಶಂಕರ್​ನನ್ನು ಹತ್ಯೆ ಮಾಡಲು ಹೊಂಚು ಹಾಕಿಕೊಂಡಿದ್ದ ಪ್ರಿಯಾಂಕಾ‌ಳ ಪ್ರಿಯಕರ ಶ್ರೀಧರ್, ಶಂಕರ್ ದೇವಸ್ಥಾನದ ಆವರಣದಲ್ಲಿ ಕಾಲಿಡುತ್ತಿದ್ದಂತೆಯೇ ಹಿಂದಿನಿಂದ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದ. ಕೊಲೆ ಬಳಿಕ ಪ್ರಿಯಾಂಕಾ‌ ತನಗೆ ಏನೂ ಗೊತ್ತಿಲ್ಲದಂತೆ ಡ್ರಾಮಾ ಮಾಡಿದ್ದಳು.

ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಆರೋಪಿ ಶ್ರೀಧರ್ ಮತ್ತು ಪ್ರಿಯಾಂಕಾ ನಡುವೆ ಸಂಬಂಧ ಇರುವುದು ಬೆಳಕಿಗೆ ಬಂದಿತು. ಕಾಲ್ ರೆಕಾರ್ಡ್, ಕಾಲ್ ಡಿಟೈಲ್ಸ್ ಹೀಗೆ ಟೆಕ್ನಿಕಲ್ ಎವಿಡೆನ್ಸ್ ಆಧಾರದ ಮೇಲೆ ಪ್ರಿಯಾಂಕಾಳನ್ನು ಬಂಧಿಸಲಾಗಿದೆ.

RELATED TOPICS:
English summary :A wife who sacrificed her husband on Bhimana amavase day by performing foot puja

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...