ಕುರುಬ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಕೆಂದ್ರಕ್ಕೆ ಶಿಫಾರಸು ಪತ್ರ | JANATA NEWS

ಬೆಂಗಳೂರು : ರಾಜ್ಯಾದ್ಯಂತ ಇರುವ ಕುರುಬ ಸಮುದಾಯವನ್ನ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಶಿಫಾರಸು, ರಾಜ್ಯ ಸರ್ಕಾರದ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರ ಪತ್ರ ಬರೆಯಲಾಗಿದೆ.
ಮೈಸೂರು ವಿಶ್ವವಿದ್ಯಾಲಯದಿಂದ ರಾಜ್ಯದಲ್ಲಿನ ಕುರುಬ ಸಮುದಾಯಯವರು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವ ಸಂಬಂಧ ಕುಲಶಾಸ್ತ್ರೀಯ ಅಧ್ಯಯನವನ್ನು ನಡೆಸಿ, ತನ್ನ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿತ್ತು.
ಈ ವರದಿಯಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಿದ್ದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ, ಕೆಲ ದಿನಗಳ ಹಿಂದೆ ಒಪ್ಪಿಗೆ ಕೂಡ ಸೂಚಿಸಲಾಗಿತ್ತು.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದ್ದಂತ ಮೈಸೂರಿನ ಬುಡಕಟ್ಟು ಸಂಶೋಧನಾ ಸಂಸ್ಥೆ ನಡೆಸಿದ್ದ ಕುಲಶಾಸ್ತ್ರೀಯ ಅಧ್ಯಯನ ವರದಿಯನ್ನು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಸಲ್ಲಿಸಿದೆ.
ಈಗ ರಾಜ್ಯಾದ್ಯಂತ ಇರೋ ಕುರುಬ ಸಮುದಾಯವನ್ನ ಎಸ್ಟಿಗೆ ಸೇರಿರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ.