ಕಾರು ಹಾಗೂ ಟಿಪ್ಪರ್ ನಡುವೆ ಅಪಘಾತ: ಸ್ಥಳದಲ್ಲೇ ನಾಲ್ವರ ಸಾವು, ಮೂವರ ಸ್ಥಿತಿ ಗಂಭೀರ | JANATA NEWS

ಹಾಸನ : ಟಿಪ್ಪರ್ ವಾಹನ ಹಾಗು ಇನೋವಾ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದ್ದು, ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ದಾರುಣ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿ ಕೂಡಿಗೆ ಬಳಿ ನಡೆದಿದೆ.
ಹಾಸನ ಜಿಲ್ಲೆಯ ಆಲೂರು ತಾಲೂಕಿನ ಈಶ್ವರಹಳ್ಳಿಯ ಕೂಡಿಗೆ ಬಳಿಯಲ್ಲಿ ಟಿಪ್ಪರ್ ವಾಹನಕ್ಕೆ ಇನೋವಾ ಕಾರೊಂದು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಆಲೂರು ಠಾಣೆಯ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
English summary :Accident between car and tipper: Four dead on the spot, three critical