ಪತ್ನಿಯನ್ನ ತಾನೇ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ನಾಟಕವಾಡಿದ್ದ ಗಂಡನ ಬಂಧನ | JANATA NEWS
ಬೆಂಗಳೂರು : ಪತ್ನಿಯನ್ನು ಕತ್ತು ಹಿಸುಕಿ ಕೊಂದು, ತಾನೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆಂದು ಹೇಳಿದ್ದ ಆರೋಪಿ ಪತಿಯನ್ನ ಬೆಂಗಳೂರು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ವಿಜಯಪುರ ಮೂಲದ ದಂಪತಿ ಕಳೆದ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಸಣ್ಣ-ಪುಟ್ಟ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.
ವಿವಾಹವಾದ ಆರಂಭದಲ್ಲೇ ಸಣ್ಣ ಸಣ್ಣ ವಿಚಾರಕ್ಕೂ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಪ್ರತಿ ದಿನ ಇಬ್ಬರ ನಡುವೆ ಜಗಳವಾಗುತ್ತಿತ್ತು. ನಿನ್ನೆ ಸಹ ದಂಪತಿ ನಡುವೆ ಕಿರಿಕ್ ಶುರುವಾಗಿತ್ತು. ಇದೇ ಕೋಪದಲ್ಲಿ ಸಿದ್ದಪ್ಪ ಹೆಂಡತಿ ಕೆಂಚಮ್ಮಳ ಮೇಲೆ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ನಂತರ ಆತಂಕಗೊಂಡ ಸಿದ್ದಪ್ಪ, ಹೆಂಡತಿಯನ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಸೃಷ್ಟಿ ಮಾಡಿ ಸಂಬಂಧಿಕರಿಗೆ ಪೋನ್ ಮಾಡಿ ನನ್ನ ಹೆಂಡತಿ ಸೂಸೈಡ್ ಮಾಡಿಕೊಂಡಿದ್ದಾಳೆ ಎಂದು ಕಥೆ ಹೇಳಿದ್ದಾನೆ. ತನ್ನ ಮೇಲೆ ಅನುಮಾನ ಬರಬಾರದು ಎನ್ನುವ ಉದ್ದೇಶದಿಂದ ಪೊಲೀಸರಿಗೂ ಕರೆ ಮಾಡಿ ಮಾಹಿತಿ ನೀಡಿದ್ದ.
ಅನುಮಾನಗೊಂಡು ಪೊಲೀಸರ ಶೈಲಿಯಲ್ಲಿ ಮತ್ತೆ ಪ್ರಶ್ನಿಸಿದ ವೇಳೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.