ಪತ್ನಿ, ಇಬ್ಬರು ಹೆಣ್ಣುಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ | JANATA NEWS

ಬೆಂಗಳೂರು : ಪತ್ನಿ ಮತ್ತು ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶೀಗೆಹಳ್ಳಿಯ ಸಾಯಿ ಗಾರ್ಡನ್ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ.
ಪತಿ ವೀರಾರ್ಜುನ ವಿಜಯ್ (31), ಪತ್ನಿ ಹೇಮಾವತಿ(25) ಹಾಗೂ 1 ವರ್ಷದ ಮಗು, ಮೂರು ವರ್ಷದ ಇಬ್ಬರು ಹೆಣ್ಣುಮಕ್ಕಳಾದ ಮೋಕ್ಷ ಮೇಘನಯನ, ಹಾಗೂ ಸೃಷ್ಟಿ ಸುನಯನ, ಮೃತ ಮಕ್ಕಳು.
ಖಾಸಗಿ ಕಂಪೆನಿಯಲ್ಲಿ ಟೆಕ್ಕಿಯಾಗಿದ್ದ ವೀರಾರ್ಜುನ ವಿಜಯ್, ಕಳೆದ 6 ವರ್ಷದಿಂದ ವೈಟ್ ಫೀಲ್ಡ್ ಸಮೀಪದ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ದಂಪತಿ ಮೂಲತಃ ಆಂಧ್ರದವರಾಗಿದ್ದಾರೆ. ಆರು ವರ್ಷಗಳ ಹಿಂದೆ ವಿವಾಹವಾಗಿದ್ದರು. ಮೊದಲು ಪತ್ನಿ ಹಾಗೂ ಮಕ್ಕಳನ್ನ ಕೊಲೆಗೈದು ಬಳಿಕ ವೀರಾರ್ಜುನ ವಿಜಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.