ಹೊಳಲ್ಕೆರೆ ಶಾಸಕ ಚಂದ್ರಪ್ಪನ ಹೆಸರು ಬರೆದಿಟ್ಟು ಗ್ರಾ.ಪಂ. ಅಧಿಕಾರಿ ಆತ್ಮಹತ್ಯೆ | JANATA NEWS

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ತಿಪ್ಪೇಸ್ವಾಮಿ ಅವರು ನಿನ್ನೆ ಹೊಸದುರ್ಗ ತಾಲೂಕಿನ ಜಾನಕಲ್ ಬಳಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಸಕ ಎಂ.ಚಂದ್ರಪ್ಪ ಅವರ ಅಮಾನತು ಬೆದರಿಕೆ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಪ್ಪೇಸ್ವಾಮಿ ಅವರು ಡೆತ್ನೋಟ್ನಲ್ಲಿ ಬರೆದಿಟ್ಟಿದ್ದಾರೆ.
ಇವರು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದ್ವಿತೀಯ ದರ್ಜೆ ಸಹಾಯಕ (SDA) ಆಗಿ ಕೆಲಸ ಮಾಡುತ್ತಿದ್ದರು. ಇನ್ನು ಶಾಸಕರ ಅಮಾನತು ಬೆದರಿಕೆ ಹಾಗೂ ಕೆಲವರ ಕಿರುಕುಳಕ್ಕೆ ಬೇಸತ್ತು ಜಾನಕಲ್ ಗ್ರಾಮದ ಬಳಿ ತಿಪ್ಪೇಸ್ವಾಮಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.