ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವುದು ನಕಲಿ ಪತ್ರ - ಸಿಎಂ ಸಿದ್ದರಾಮಯ್ಯ | JANATA NEWS

ಬೆಂಗಳೂರು : ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ವಿರುದ್ಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿರುವುದು ನಕಲಿ ಪತ್ರ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ ತನಿಖೆ ನಡೆಸುತ್ತೇವೆ.
ಕರ್ನಾಟಕ ಬಿಜೆಪಿ ನಾಯಕರೇ ಇಂತಹ ನಕಲಿ ಪತ್ರವನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ನೀವೇ ಇದರ ಸೃಷ್ಟಿಕರ್ತರೋ? ಅಥವಾ ನಿಮ್ಮ "ಬ್ರದರ್ರೋ"?, ಎಂದು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ನೀಡಿದ್ದಾರೆ ಎಂಬರ್ಥದಲ್ಲಿ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪತ್ರ ನಕಲಿಯಾದುದು ಎಂದು ಬಯಲಾಗಿದೆ.
— Siddaramaiah (@siddaramaiah) August 7, 2023
ಅಂತಹ ಅಧಿಕಾರಿಗಳು ಯಾರು ಜಿಲ್ಲೆಯಲ್ಲಿ ಇಲ್ಲ ಎಂದು ಮಂಡ್ಯದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.
ಹೀಗಿದ್ದರೂ ಈ ಸಂಬಂಧ ಪರಿಶೀಲನೆ ನಡೆಸಿ, ಅಗತ್ಯ ಕಂಡುಬಂದಲ್ಲಿ… pic.twitter.com/kPR5TQColK