ಚುನಾವಣಾ ಸೋಲಿನ ಆಘಾತದಿಂದಾಗಿ ಕುಮಾರಸ್ವಾಮಿ ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತಿದೆ | JANATA NEWS
ಬೆಂಗಳೂರು : ಮಾಜಿ ಸಿ.ಎಂ. ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಪಗಳಿಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು, ಭಾಷೆ ಗಮನಿಸಿದರೆ ಸೋಲಿನ ಆಘಾತದಿಂದ ಮಾನಸಿಕ ಸ್ಥಿಮಿತ ಕಳೆದುಕೊಂಡಂತೆ ಕಾಣುತ್ತಿದೆ. ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ ಎಂದರು.
ನೀವು ಪ್ರಸ್ತಾಪಿಸಿರುವ ಶಾಸಕರ ಪತ್ರದ ನಕಲಿ ಮತ್ತು ಅಸಲಿ ವಿಚಾರದ ಬಗ್ಗೆ ತನಿಖೆ ನಡೆಸಲಾಗುವುದು. ಈ ಬಗ್ಗೆ ಶೀಘ್ರದಲ್ಲೇ ತನಿಖೆಯಿಂದ ಹೊರಬೀಳಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ 'ನಕಲಿರಾಮ'ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ 'ಅಸಲಿ'ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.
ಸನ್ಮಾನ್ಯ @hd_kumaraswamy ಅವರೇ,
— Siddaramaiah (@siddaramaiah) August 8, 2023
ಇತ್ತೀಚೆಗೆ ನೀವು ನನ್ನ ವಿರುದ್ಧ ಮಾಡುತ್ತಿರುವ ವೈಯಕ್ತಿಕ ಮಟ್ಟದ ಆರೋಪಗಳು ಮತ್ತು ಬಳಸುತ್ತಿರುವ ಭಾಷೆಯನ್ನು ಗಮನಿಸಿದರೆ ಚುನಾವಣಾ ಸೋಲಿನ ಆಘಾತದಿಂದಾಗಿ ನೀವು ಮಾನಸಿಕ ಸ್ಥಿಮಿತತೆಯನ್ನು ಕಳೆದುಕೊಂಡಂತೆ ಕಾಣುತ್ತಿದೆ.
ಶೀಘ್ರವಾಗಿ ಗುಣಮುಖರಾಗಿ ಎಂದಷ್ಟೇ ನಾನು ಹಾರೈಸಬಲ್ಲೆ.
ಇನ್ನು ನೀವು… https://t.co/dXtacPzEHE