ಕುತೂಹಲ ಕೆರಳಿಸಿದ ಬಸವರಾಜ ಬೊಮ್ಮಾಯಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಭೇಟಿ | JANATA NEWS
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಹಾಗೂ ವಿಧಾನಪರಿಷತ್ ವಿಪಕ್ಷ ನಾಯಕ ಆಯ್ಕೆ ವಿಳಂಬ ಬೆನ್ನಲ್ಲೇ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಷಾರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಈ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಮತ್ತು ವಿರೋಧ ಪಕ್ಷದ ನಾಯಕನ ಸ್ಥಾನದ ಆಯ್ಕೆಯ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆನ್ನಲಾಗಿದೆ.
ವಿಪಕ್ಷ ನಾಯಕರ ಹೆಸರನ್ನು ಅಂತಿಮಗೊಳಿಸಲು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೊಮ್ಮಾಯಿ ಅವರನ್ನು ಮಾತುಕತೆ ಆಹ್ವಾನಿಸಿದ್ದರು ಎಂದು ಮೂಲಗಳು ಹೇಳಿವೆ.
ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ನನಗೆ ವರಿಷ್ಠರು ದೆಹಲಿಗೆ ಬರುವಂತೆ ಹೇಳಿರಲಿಲ್ಲ. ಸಂಸತ್ ಅಧಿವೇಶನದ ಸಮಯದಲ್ಲಿ ದೆಹಲಿಗೆ ಬರುವಂತೆ ರಾಜ್ಯದ ಸಂಸದರು ಆಹ್ವಾನಿಸಿದ ಮೇರೆಗೆ ನಾನು ಬಂದಿದ್ದೇನೆ. ನಾನು ಕೆಲಸದ ನಿಮಿತ್ತ ಸಂಸದರನ್ನೂ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಆ ಸಮಯದಲ್ಲಿ ರಾಷ್ಟ್ರೀಯ ನಾಯಕರ ಜೊತೆ ಭೇಟಿ ಮಾಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ರಾಜ್ಯದ ಹಲವು ವಿಷಯಗಳ ಕುರಿತು ಚರ್ಚಿಸಿದೆನು. @AmitShah pic.twitter.com/3FXROC2Nkp
— Basavaraj S Bommai (@BSBommai) August 8, 2023