ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ | JANATA NEWS
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿಯನ್ನೂ ಮುಂದುವರೆಸಿರುವ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ ಕರ್ನಾಟಕ ಮುಖ್ಯಮಂತ್ರಿ ಕಚೇರಿಯ ಐದಾರು ಟಿಪ್ಪಣಿಗಳು ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್ಡಿಕೆ ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ ಸಿದ್ದಕಲೆ ನನಗಂತೂ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.
ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣವರು ಈಗ ಹೊಸ ಜೇಳಿಯೊಂದನ್ನೂ ನೀಡಿದ್ದು, ಬಾಣಲೆಯಿಂದ ಬೆಂಕಿಗೆ ಬಿದ್ದಂತಾಗಿದೆ ಎಂದಿದ್ದಾರೆ. ಇದೇ ಕೆಂಪಣ್ಣನವರ 40% ಆರೋಪವನ್ನೇ ಅಸ್ತ್ರ ಮಾಡಿಕೊಂಡು,ಕೆಂಪಣ್ಣನವರ ಕೃಪಾಕಟಾಕ್ಷದಿಂದಲೇ ಅಧಿಕಾರಕ್ಕೆ ಬಂದಿದ್ದೀರಿ. ಈಗ ಅವರನ್ನೇ ಬೆಂಕಿಗೆ ಹಾಕಲು ಹೊರಟಿದ್ದೀರಿ. ಇದು ಎಂಥಾ ಮನಃಸ್ಥಿತಿ ಇದಕ್ಕೆ ಚಿಕಿತ್ಸೆ ಬೇಡವೇ ಎಂದು ಪ್ರಶ್ನಿಸಿದ್ದಾರೆ.
ನಮ್ಮ ಸೋಲಿನ ಆಘಾತ ಇರಲಿ, ನಿಮ್ಮ ಶಾಸಕರ ವರಾತ ಕಥೆ ಏನು? 136 ಸೀಟು ಎಂದು ಬೀಗುತ್ತಿದ್ದೀರಿ, ಹಣದುಬ್ಬರದಂತೆ 'ಅತಿ ಉಬ್ಬರ'ವೂ ದೇಶಕ್ಕೆ ಒಳ್ಳೆಯದಲ್ಲ. ಸಭ್ಯ ಭಾಷೆಯಲ್ಲೇ ತಮಗೆ ಹೇಳುತ್ತಿದ್ದೇನೆ. ಅರ್ಥವಾಗಿದೆ ಎಂದು ಭಾವಿಸುತ್ತೇನೆ ಎಂದಿದ್ದಾರೆ.
ಭ್ರಷ್ಟಾಚಾರದ ಆರೋಪವನ್ನೇ ಅನುಕಂಪವನ್ನಾಗಿ ಪರಿವರ್ತಿಸಿಕೊಳ್ಳುವ 'ಸಿದ್ದಕಲೆ' ನನಗಂತೂ ಗೊತ್ತಿಲ್ಲ. ಒಂದೇ ಹುದ್ದೆಗೆ @CMofKarnataka ಕಚೇರಿಯ ಐದಾರು ಟಿಪ್ಪಣಿಗಳು 'ನಡೆದಂತೆ ಎಲ್ಲವನ್ನೂ ನುಡಿಯುತ್ತಿವೆ' ಹಾಗೂ ಆಯ್ದ ಕಿಸೆಗಳನ್ನು ಭರ್ತಿ ತುಂಬುತ್ತಿವೆ! 4/5
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) August 9, 2023