ಬಿಬಿಎಂಪಿ ಬೆಂಕಿ ಪ್ರಕರಣ: 7 ಮಂದಿಗೆ ಗಾಯ, ಪಾಲಿಕೆಗೆ ಸಿಎಂ ಭೇಟಿ, ತನಿಖೆ ನಡೆಸಲು ಕಮಿಷನರ್ಗೆ ಸೂಚನೆ | JANATA NEWS
ಬೆಂಗಳೂರು : ಬಿಬಿಎಂಪಿ ಮುಖ್ಯ ಕಚೇರಿಯ ಆವರಣ ಕಟ್ಟದಲ್ಲಿ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ 9ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲಿಕೆ ಮುಖ್ಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಆರೋಗ್ಯವನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿಚಾರಿಸಿದ್ದಾರೆ. ಆ ಬಳಿಕ ಘಟನಾ ಸ್ಥಳಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆ ಬಳಿಕ ಮಾತನಾಡಿದ ಸಿಎಂ, ಬಿಬಿಎಂಪಿಯಲ್ಲಿ ಬೆಂಕಿ ಹತ್ತಿಕೊಂಡಿದೆ. ಬೆಂಕಿ ಹತ್ತಿಕೊಂಡಾಗ ಆಪರೇಟರ್ಸ್ ಕರೆದಿದ್ದಾರೆ, ಹೊಗೆ ಜಾಸ್ತಿಯಾಗಿದೆ. ಆಗ ಒಳಗಿಂದ ಬರುವಾಗ ಬೆಂಕಿ ತಗುಲಿದೆ. ಬೆಸ್ಟ್ ಚಿಕಿತ್ಸೆ ಕೊಡಿ ಅಂತ ಹೇಳಿದ್ದೇನೆ. ಯಾಕಾಯ್ತು? ಏನಾಯ್ತು? ಅಂತ ತನಿಖೆ ಮಾಡಲು ಹೇಳಿದ್ದೇನೆ. ಟ್ವೀಟ್ ಮಾಡಿದ್ದಾರೆ, ಅದು ಬೇಕಿಲ್ಲ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲು ಹೇಳಿದ್ದೇವೆ ಎಂದು ತಿಳಿಸಿದರು.
ಸಂಜೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕೂಡಲೇ ಸ್ಥಳದಲ್ಲಿದ್ದ ಸಾರ್ವಜನಿಕರು ಅಗ್ನಿ ಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಆದರೆ ಸಕಾಲಕ್ಕೆ ಯಾರು ಬರದ ಹಿನ್ನೆಲೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಬಿಬಿಎಂಪಿ ಸಿಬ್ಬಂದಿ ಗಾಯಾಳುಗಳನ್ನು ಹೊರಗೆ ತಂದು ಪೊಲೀಸ್ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
ಚೀಫ್ ಎಂಜಿನಿಯರ್ ಶಿವಕುಮಾರ್, ಕಿರಣ್, ಸಂತೋಷ್ ಕುಮಾರ್, ಸಿರಾಜ್, ಮನೋಜ್, ಶ್ರೀಧರ್, ವಿಜಯಮಾಲಾ, ಜ್ಯೋತಿ, ಶ್ರೀನಿವಾಸ್ ಎಂಬ ಅಧಿಕಾರಿಗಳಿಗೆ ಗಾಯಗಳಾಗಿವೆ.
ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದರಿಂದ ದಟ್ಟ ಹೊಗೆ ಆವರಿಸಿತ್ತು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ಸಾಕಷ್ಟು ಶ್ರಮಿಸಬೇಕಾಯಿತು. ಸತತ ಅರ್ಧಗಂಟೆಯ ಕಾರ್ಯಾಚರಣೆ ಬಳಿಕೆ ಬೆಂಕಿ ತಹಬದಿಗೆ ಬಂದಿದೆ.
ಮುಖ್ಯಮಂತ್ರಿ @siddaramaiah ಅವರು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಬಿಬಿಎಂಪಿ ಕಚೇರಿಯ ಅಗ್ನಿ ಅನಾಹುತದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿ, ಎಲ್ಲರನ್ನೂ ಟ್ರಾಮಾ ಸೆಂಟರ್ ಗೆ ಶಿಫ್ಟ್ ಮಾಡಿ ಉತ್ತಮ ಚಿಕಿತ್ಸೆ ನೀಡಲು ಸೂಚಿಸಿದರು.
— CM of Karnataka (@CMofKarnataka) August 11, 2023
ಇದೇ ವೇಳೆ ಘಟನೆ ಬಗ್ಗೆ ಪ್ರತ್ಯೇಕ ತನಿಖೆ ನಡೆಸುವಂತೆ ನಗರ ಪೊಲೀಸ್… pic.twitter.com/2aqlzy0Yhc