Wed,Sep27,2023
ಕನ್ನಡ / English

ನಟ ಉಪೇಂದ್ರ ಹೇಳಿದ್ದೇನು? ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲು | JANATA NEWS

13 Aug 2023
359

ಬೆಂಗಳೂರು : ನಟ, ಉತ್ತಮ ಪ್ರಜಾಕೀಯ ಪಕ್ಷ ಸಂಸ್ಥಾಪಕ ಉಪೇಂದ್ರ ಅವರ ಹೇಳಿಕೆ ಇದೀಗ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದು ಈ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಉಪೇಂದ್ರ ವಿರುದ್ಧ ಅಟ್ರಾಸಿಟಿ ದೂರು ದಾಖಲಿಸಿದ್ದಾರೆ.

ಉಪೇಂದ್ರ ಫೇಸ್​ಬುಕ್​ ಲೈವ್ ಬಂದು ಅಭಿಮಾನಿಗಳ ಜೊತೆ ಚರ್ಚೆಯೂ ನಡೆಸುತ್ತಾರೆ. ಹೀಗೆ ಸೋಷಿಯಲ್ ಮೀಡಿಯಾದಲ್ಲಿ ಲೈವ್‌ಗೆ ಬಂದಾಗ ಆಕ್ಷೇಪಾರ್ಹ ಪದ ಬಳಸಿದ್ದಾರೆ ಅನ್ನೋ ಆರೋಪ ಕಿಚ್ಚು ಹೊತ್ತಿಸಿದೆ.

UPP ಸ್ಥಾಪನೆಯಾಗಿ ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ 'ಪ್ರಜಾಕೀಯ ದಿನ' ಆಚರಣೆ ಪ್ರಯುಕ್ತ ಫೇಸ್ ಬುಕ್ ನಲ್ಲಿ ಲೈವ್ ಬಂದಿದ್ದ ಉಪೇಂದ್ರ ಮಾತಿನ ನಡುವೆ ಬಳಸಿದ ಗಾದೆ ಮಾತಿಗೆ ಇದೀಗ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕಳೆದ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಇತರೆ ಕೆಲವು ರಾಜಕೀಯ ಪಕ್ಷಗಳಿಗಿಂತಲೂ ಹೆಚ್ಚು ಮತಗಳನ್ನು ಯಾವುದೇ ಪ್ರಚಾರವಿಲ್ಲದೆ ಪಡೆದಿದ್ದಾರೆ ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದರು. ನಂತರ ಮಾತು ಮುಂದುವರೆಸಿ ಯಾವುದೋ ಮಾತಿಗೆ 'ಊರೆಂದರೆ ಹೊಲೆಗೇರಿ ಇದ್ದೇ ಇರುತ್ತದೆ' ಎಂದು ಹೇಳಿದ್ದು ಈ ಮಾತಿಗೆ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ.

ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಅಟ್ರಾಸಿಟಿ ಕೇಸ್ ದಾಖಲಾಗಿದೆ. ಉಪೇಂದ್ರ ವಿರುದ್ಧ ಪ್ರತಿಭಟನೆ ಶುರುವಾಗಿದ್ದು, ರಾಮನಗರಲ್ಲಿ ನಟ ಉಪೇಂದ್ರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಹಾರೋಹಳ್ಳಿ ವೃತ್ತದಲ್ಲಿ ದಲಿತ ಪರ ಸಂಘಟನೆಗಳ ಮುಖಂಡರು ಉಪೇಂದ್ರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ್ದಾರೆ. ನಟ ಉಪೇಂದ್ರ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿವೆ.

ಈ ಹೇಳಿಕೆಯನ್ನು ಖಂಡಿಸಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಎಂಬುವರು ಸಿಕೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನಟ ಉಪೇಂದ್ರ ಅವರು ಇದೀಗ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮೂಲಕ ಕ್ಷಮೆ ಕೋರಿದ್ದಾರೆ. 'ಇಂದು ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ನೇರ ಪ್ರಸಾರದಲ್ಲಿ ಬಾಯಿ ತಪ್ಪಿ ಒಂದು ಗಾದೆ ಮಾತನ್ನು ಬಳಸಿದ್ದು. . ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡು ಬಂದ ತಕ್ಷಣವೇ ಆ ಲೈವ್ ವಿಡಿಯೋ ವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿರುತ್ತೇನೆ.. ಮತ್ತು ಈ ಮಾತಿಗೆ ಕ್ಷಮೆಯಿರಲಿ...' ಎಂದು ತಮ್ಮ ಫೇಸ್‌ಬುಕ್ ಅಕೌಂಟ್‌ನಲ್ಲಿ ನಟ ಉಪೇಂದ್ರ ಬರೆದುಕೊಂಡಿದ್ದಾರೆ.

English summary :What did actor Upendra say? Atrocity case registered against Upendra

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...