ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ | JANATA NEWS

ಬೆಂಗಳೂರು : ಮಾತಿನ ನಡುವೆ ಗಾದೆಮಾತೊಂದನ್ನು ಹೇಳಿದ್ದ ಸಲುವಾಗಿ ರಿಯಲ್ ಸ್ಟಾರ್ ಉಪೇಂದ್ರ ವಿರುದ್ಧ ಕೆಲವರು ದಾಖಲಿಸಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಿಯಲ್ ಸ್ಟಾರ್ ಉಪೇಂದ್ರ ಅವರು 'ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ' ಎಂದು ಬರೆದಿದ್ದಾರೆ. ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ.
ದ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ. ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹೃದಯಗಳು ಹಿಡಿದ ಪ್ರೀತಿಯ ಕೊಡೆ. ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ. ನನಗೆ ಕೊಡೆ. ಧನ್ಯವಾದಗಳು' ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ಗೌಡರ್ ಅವರಿದ್ದ ಏಕಸದಸ್ಯ ಪೀಠವು ನಟ ಉಪೇಂದ್ರ ವಿರುದ್ಧ ದಾಖಲಾಗಿದ್ದ FIRಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ.
ನಟ ಉಪೇಂದ್ರ ಪರ ವಾದ ಮಂಡಿಸಿದ ವಕೀಲ ಉದಯ್ ಹೊಳ್ಳ ತಮ್ಮ ಕಕ್ಷಿದಾರರು ತಾವು ಆಡಿರುವ ಮಾತುಗಳಿಗೆ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಆ ವಿಡಿಯೋವನ್ನು ಸಹ ಸಾಮಾಜಿಕ ಜಾಲತಾಣದಿಂದ ತೆಗೆದು ಹಾಕಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶದಿಂದ ಆಡಿದ ಮಾತು ಅದಾಗಿರಲಿಲ್ಲ.
ಈ ಪ್ರಕರಣದಲ್ಲಿ ಎಸ್ಸಿ-ಎಸ್ಟಿ ಕಾಯ್ದೆ ಅನ್ವಯಿಸದ ಕಾರಣ ಎಫ್‌ಐಆರ್ ದಾಖಲಿಸಿ ತನಿಖೆ ಮಾಡುತ್ತಿರುವುದು ಸರಿಯಲ್ಲ. ಕೇವಲ ಗಾದೆ ಮಾತನ್ನು ಉಲ್ಲೇಖ ಮಾಡಿದ್ದಾರೆ.
ಅನ್ಯಾಯದ ಅನುಮಾನಕ್ಕೇ ಹೆಡೆ ಬಿಚ್ಚಿ ಬುಸುಗುಟ್ಟಿದ ಪಡೆ 🙏
— Upendra (@nimmaupendra) August 14, 2023
ಧ್ವೇಷದ ಆಟಕ್ಕೆ ತಡೆ ಹಿಡಿದ ಹೈಕೋರ್ಟ್ ನಡೆ 🙏
ಅನಿರೀಕ್ಷಿತ ಬಿಸಿಲ ತಾಪಕ್ಕೆ ಸಹ್ರದಯಗಳು ಹಿಡಿದ ಪ್ರೀತಿಯ ಕೊಡೆ 🙏
ನನ್ನನ್ನು ತಿದ್ದಿ ತೀಡುತ್ತಿರುವ ನಿಮ್ಮೆಲ್ಲರನ್ನೂ ಇನ್ನೂ ಹೆಚ್ಚು ಹೆಚ್ಚು ಪ್ರೀತಿಸುವ ಹ್ರದಯ ನನಗೆ ಕೊಡೆ ತಾಯಿ… 🙏 ನನಗೆ ಕೊಡೆ 🙏
ಧನ್ಯವಾದಗಳು Thank you…