ಕೆಂಪುಕೋಟೆ ಮೇಲೆ 10ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಮೋದಿ | JANATA NEWS
ಬೆಂಗಳೂರು : ದೇಶಾದ್ಯಂತ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರು ದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರ ಧ್ವಜವನ್ನು ಧ್ವಜಾರೋಹಣ ಮಾಡಿದ್ದಾರೆ.
ದೇಶದ ಮೊದಲ ಪ್ರಧಾನ ಮಂತ್ರಿ ಕಾಂಗ್ರೆಸ್ ನಾಯಕ ಪಂಡಿತ್ ಜವಹರಲಾಲ್ ನೆಹರು (1947 ರಿಂದ 1963) 17 ಬಾರಿ ಕೆಂಪುಕೋಟೆಯಲ್ಲಿ ಧ್ವಜರೋಹಣ ಮಾಡಿದ್ದಾರೆ. ಈ ಮೂಲಕ ಅತಿ ಹೆಚ್ಚು ಬಾರಿ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಪ್ರಧಾನಮಂತ್ರಿ ಎಂಬ ದಾಖಲೆ ಬರೆದಿದ್ದಾರೆ.
ಮೋದಿ ಸತತ 10ನೇ ಬಾರಿ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಮೊದಲ ಕಾಂಗ್ರೆಸೇತರ ಪ್ರಧಾನ ಮಂತ್ರಿ ಎಂಬ ಹೆಗ್ಗಳಿಗೆ ಪಾತ್ರರಾಗಲಿದ್ದಾರೆ.
ಇನ್ನು ರಾಜ್ಯದಲ್ಲಿ ಬೆಂಗಳೂರಿನ ಮಾಣಿಕ್ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾ ಆರೋಹಣ ಮಾಡಲಿದ್ದಾರೆ.