ವಿಭಜನ ವಿಭೀಷಕ ಸ್ಮೃತಿ ದಿವಸ : ಬೆಂಗಳೂರಿನಲ್ಲಿ ನಡೆದ ಪಂಜಿನ ಮೆರವಣಿಗೆ | JANATA NEWS

ಬೆಂಗಳೂರು : 1947ರಲ್ಲಿ ಸ್ವಾತಂತ್ರ್ಯ ದಿನದ ಪೂರ್ವ ಆಗಸ್ಟ್ 14ರಂದು ದೇಶ ವಿಭಜನೆಯ ಸಂದರ್ಭದಲ್ಲಿ ನಡೆದ ಕರಾಳ ದುರ್ಘಟನೆಯ ಸಂತಾಪ ಕಾರ್ಯಕ್ರಮವಾದ "ವಿಭಜನ ವಿಭೀಷಕ ಸ್ಮೃತಿ ದಿವಸ" ಕಾರ್ಯಕ್ರಮದ ಅಂಗವಾಗಿ ರಾಜ್ಯ ಬಿಜೆಪಿ ಪಕ್ಷದ ಮುಖಂಡರು ರಾಜಧಾನಿ ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಿದರು.
ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ನೇತ್ರತ್ವದಲ್ಲಿ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲೆ ವತಿಯಿಂದ ವಿಭಜನ ವಿಭೀಷಕ ಸ್ಮೃತಿ ದಿವಸ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಶಾಸಕರಾದ ಎಸ್. ಆರ್. ವಿಶ್ವನಾಥ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷರಾದ ಬಿ. ನಾರಾಯಣ್ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.