ಹೊಟ್ಟೆ ನೋವಿನ ಚಿಕಿತ್ಸೆಗೆ ಬಂದ ಹುಡುಗನ ಸಾವು | JANATA NEWS

ಮಂಗಳೂರು : ಹೊಟ್ಟೆ ನೋವೆಂದು ಚಿಕಿತ್ಸೆಗೆ ಬಂದ ಹುಡುಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.
ಸೃಜಿತ್(17) ಮೃತ ಹುಡುಗ. ಸುಳ್ಯದ ಪೈಚಾರ್ ಶಾಂತಿನಗರ ನಿವಾಸಿಯಾಗಿದ್ದಾನೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಸೃಜಿತ್‍ನನ್ನು ಶನಿವಾರ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂತೆಯೇ ಖ್ಯಾತ ವೈದ್ಯ ಸೃಜಿತ್‍ಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ನಂತರ ರಾತ್ರಿ ವೇಳೆ ಯುವಕನ ಸ್ಥಿತಿ ಗಂಭೀರವಾಗಿದೆ ಮಂಗಳೂರಿಗೆ ಕರೆದುಕೊಂಡು ಹೋಗಿ ಎಂದು ವೈದ್ಯರು ತಿಳಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಹುಡುಗ ಮೃತ ಪಟ್ಟಿದ್ದಾನೆ.
ವೈದ್ಯರ ಬೇಜವಾಬ್ದಾರಿಯಿಂದ ಸೃಜಿತ್ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಚೇತನಾ ಆಸ್ಪತ್ರೆಯ ವೈದ್ಯರು ವೆಂಟಿಲೇಟರ್ ವ್ಯವಸ್ಥೆ ಇಲ್ಲದೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ ಎಂದು ಆರೋಪಿಸಿ ಸೃಜಿತ್ ಶವವನ್ನ ಆಸ್ಪತ್ರೆ ಮುಂದಿಟ್ಟು ಪ್ರತಿಭಟನೆ ನಡೆಸಿದ್ದಾರೆ.
ಪುತ್ತೂರು ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.