ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳು ಹಾಗೂ ಲೋಕಸಭಾ ಚುನಾವಣೆ ತಯಾರಿ ಸಭೆ | JANATA NEWS

ಬೆಂಗಳೂರು : ಬೆಂಗಳೂರಿನ ಅಭಿವೃದ್ಧಿ ಕಾರ್ಯಗಳು ಹಾಗೂ ಲೋಕಸಭಾ ಚುನಾವಣೆ ತಯಾರಿ ಸಂಬಂಧ ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ಇಂದು ಬೆಂಗಳೂರಿನ ಸಚಿವರು ಹಾಗೂ ಶಾಸಕರೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಬೆಂಗಳೂರು ನಗರ ಜಿಲ್ಲೆಯ ಶಾಸಕರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಿಎಂ ಕಚೇರಿಯಲ್ಲಿ ಸಭೆ ನಡೆಸಿದರು.
ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡುವ ವಿಚಾರ, ಪಕ್ಷದಲ್ಲಿ ಸಮನ್ವಯತೆ, ಬಿಬಿಎಂಪಿ ಕ್ಷೇತ್ರದ ಅಭಿವೃದ್ಧಿ ಹಾಗೂ ಮುಂಬರುವ ಲೋಕಸಭೆ ಚುನಾವಣೆ ಕುರಿತು ಸಿಎಂ ಹಾಗೂ ಉಪ ಸಿಎಂ ಅಭಿಪ್ರಾಯ ವ್ಯಕ್ತಪಡಿಸಿದರು.
English summary :Bengaluru Development Works and Lok Sabha Election Preparation Meeting