ಹಿಂದೂ ದೇವಾಲಯಗಳ ಅಭಿವೃದ್ಧಿ ಅನುದಾನಗಳನ್ನು ತಡೆ ಹಿಡಿದು ಆದೇಶ ಹೊರಡಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ | JANATA NEWS

ಬೆಂಗಳೂರು : ದೇವಾಲಯಗಳ ಅಭಿವೃದ್ಧಿ/ಜೀರ್ಣೋದ್ದಾರಕ್ಕೆ 2022-23ಸಾಲಿನಲ್ಲಿ ನೀಡಲಾಗುವ ಅನುದಾನಗಳನ್ನು ರಾಜ್ಯ ಸರ್ಕಾರ ತಡೆ ಹಿಡಿಡು ಆದೇಶ ಹೊರಡಿಸಿದೆ. ಇದು ವಿರೋಧಪಕ್ಷಗಳು ಸೇರಿದಂತೆ ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮೂರು ವಿಷಯ ಪ್ರಸ್ತಾಪಿಸಿ ದೇವಸ್ಥಾನ ಜೀರ್ಣೋದ್ಧಾರ ಅನುದಾನ ಬಿಡುಗಡೆಗೆ ತಡೆ ಹಿಡಿದು ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ.
ದೇವಸ್ಥಾನ ಜೀರ್ಣೋದ್ದಾರ ಕಾಮಗಾರಿ ಇನ್ನೂ ಪ್ರಾರಂಭ ಆಗದಿದ್ದರೆ ಹಣ ಬಿಡುಗಡೆ ಮಾಡದಂತೆ ಧಾರ್ಮಿಕ ದತ್ತಿ ಇಲಾಖೆ ಆದೇಶದಲ್ಲಿ ಸೂಚಿಸಿದೆ.
ಇನ್ನು ಶೇ.50 ರಷ್ಟು ಹಣ ಬಿಡುಗಡೆಗೆ ಆಡಳಿತಾತ್ಮಕ ಅನುಮೋದನೆ ನೀಡಿದ್ದರೆ ಅದನ್ನು ತಕ್ಷಣ ತಡೆ ಹಿಡಿದು ಅನುದಾನ ಬಿಡುಗಡೆ ಮಾಡದಂತೆ ಸೂಚನೆ ನೀಡಲಾಗಿದೆ.
ಅನುದಾನದ ಆಡಳಿತಾತ್ಮಕ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಕೆ ಆಗಿದ್ದರೆ ಆಡಳಿತಾತ್ಮಕ ಮಂಜೂರಾತಿಯನ್ನು ತಡೆಹಿಡಿಯುವುದು.
ಈ ಕುರಿತು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮೂರು ನಿರ್ದೇಶನಗಳನ್ನು ನೀಡಿದ್ದಾರೆ.