ವಿಧಾನ ಪರಿಷತ್ ಗೆ ನಟಿ ಉಮಾಶ್ರೀ ಸೇರಿ ಮೂವರ ಪಟ್ಟಿಗೆ ರಾಜ್ಯಪಾಲ ಗೆಹ್ಲೋಟ್ ಅನುಮೋದನೆ! | JANATA NEWS
ಬೆಂಗಳೂರು : ವಿಧಾನಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಮೂವರ ಹೆಸರನ್ನು ಫೈನಲ್ ಮಾಡಲಾಗಿತ್ತು. ಅಲ್ಲದೇ ರಾಜ್ಯಪಾಲರ ಥಾವರ್ ಚಂದ್ ಗೆಲ್ಹೋಟ್ ಅವರಿಗೆ ಅನುಮೋದನೆಗಾಗಿ ಸರ್ಕಾರ ಕಳುಹಿಸಿಕೊಟ್ಟಿತ್ತು. ಈಗ ರಾಜ್ಯಪಾಲರ ಅಂಕಿತವೂ ಸಿಕ್ಕಿದ್ದು, ಈ ಮೂಲಕ ಕಾಂಗ್ರೆಸ್ನಿಂದ ಮೂವರು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ.
ಮಾಜಿ ಸಚಿವೆ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಸುಧಾಮ್ದಾಸ್ ಪರಿಷತ್ ಅವರನ್ನು ಕಾಂಗ್ರೆಸ್ ವಿಧಾನಪರಿಷತ್ಗೆ ನಾಮನಿರ್ದೇಶನ ಮಾಡಿದೆ. ಈ ಕುರಿತು ರಾಜ್ಯಪತ್ರದಲ್ಲಿ ಅಧಿಕೃತವಾಗಿ ಪ್ರಕಟಗೊಂಡಿದೆ.
ಕರ್ನಾಟಕ ವಿಧಾನಪರಿಷತ್ ನಾಮ ನಿರ್ದೇಶಿತ ಸದಸ್ಯರ ಖಾಲಿ ಸ್ಥಾನಗಳ ಭರ್ತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಚಾಲನೆ ನೀಡಿತ್ತು. ವಿಧಾನಪರಿಷತ್ ನ ನಾಮ ನಿರ್ದೇಶಿತ ಸದಸ್ಯರಾಗಿ ಮೂವರ ಹೆಸರು ಅಂತಿಮಗೊಳಿಸಿ, ರಾಜ್ಯಪಾಲರಿಗೆ ಈ ಪಟ್ಟಿಯನ್ನು ರವಾನಿಸಲಾಗಿತ್ತು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ವಿಧಾನ ಪರಿಷತ್ ನಾಮ ನಿರ್ದೇಶಿತ ಸ್ಥಾನಕ್ಕೆ ಮೂವರ ಹೆಸರನ್ನು ಫೈನಲ್ ಮಾಡಿ, ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದ್ದರು.
ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್ ಸೀತಾರಾಂ ಹಾಗೂ ಮಾಜಿ ಇಡಿ ಅಧಿಕಾರಿ ಸುಧಾಮ್ ದಾಸ್ ಅವರ ಹೆಸರನ್ನು ಶಿಫಾರಸ್ಸು ಮಾಡಲಾಗಿತತು.
ವಿಧಾನಪರಿಷತ್ತಿಗೆ ಮೂವರು ನಾಮನಿರ್ದೇಶಿತರ ಹೆಸರನ್ನು ಪಟ್ಟಿ ಮಾಡಿಕೊಂಡು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜ್ಯಪಾಲರ ಒಪ್ಪಿಗೆಗೆ ಕಳುಹಿಸಿದ್ದರು.