ಅಮೆರಿಕಾದಲ್ಲಿ ದಾವಣಗೆರೆ ಮೂಲದ ಪತಿ, ಪತ್ನಿ, ಮಗು ಅನುಮಾನಾಸ್ಪದ ಸಾವು | JANATA NEWS

ದಾವಣಗೆರೆ : ಅಮೆರಿಕಾದಲ್ಲಿ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಹಾಲೆಕಲ್ಲು ಗ್ರಾಮ ಪತಿ, ಪತ್ನಿ ಹಾಗೂ ಅವರ ಗಂಡು ಮಗು ಮೃತಪಟ್ಟ ಘಟನೆ ನಡದಿದೆ.
ಮೃತರನ್ನು ಯೋಗೇಶ್ ಹೊನ್ನಾಳ (37), ಪ್ರತಿಭಾ ಹೊನ್ನಾಳ್ (35) ಹಾಗೂ ಅವರ ಪುತ್ರ ಯಶ್ ಹೊನ್ನಾಳ್(6) ಸಾವನ್ನಪ್ಪಿದ್ದಾರೆ. ಇವರು ದಾವಣಗೆರೆ ಜಿಲ್ಲೆಯ ಜಗಳೂರು ತಾಲ್ಲೂಕಿನ ಹಾಲೆಕಲ್ಲು ಗ್ರಾಮದವರಾಗಿದ್ದಾರೆ.
ಕಳೆದ 9 ವರ್ಷಗಳ ಹಿಂದೆ ದಂಪತಿ ಮದುವೆಯಾಗಿದ್ದು, ಬಳಿಕ ಅಮೆರಿಕಾದಲ್ಲಿ ವಾಸವಾಗಿದ್ದರು. ಮೃತ ಪತಿ ಹಾಗೂ ಪತ್ನಿ ಇಬ್ಬರೂ ವೃತ್ತಿಯಲ್ಲಿ ಎಂಜಿನಿಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮದುವೆಯ ನಂತರ ದಂಪತಿಗಳು ಅಮೆರಿಕಾದ ಮೇರಿಲ್ಯಾಂಡ್ ರಾಜ್ಯದಲ್ಲಿರುವ ಬಾಲ್ಟಿಮೋರ್ ಎಂಬ ಪ್ರದೇಶದಲ್ಲಿ ನೆಲೆಸಿದ್ದರು.
ಅಮೇರಿಕಾ ಪೊಲೀಸರು ನೀಡಿರುವ ಮಾಹಿತಿಯಂತೆ ಅವರ ವಾಸವಿದ್ದ ನಿವಾಸದಲ್ಲೇ ಮೂವರ ಮೃತದೇಹ ಪತ್ತೆಯಾಗಿದೆ.ಮೂರು ದಿನಗಳಾದ್ರು ಮನೆ ಹೊರಗೆ ಯಾವುದೆ ಚಟುವಟಿಕೆ ಬಾರದ ಹಿನ್ನಲೆಯಲ್ಲಿ ಪೊಲೀಸರು ಮನೆಯ ಬಾಗಿಲು ಹೊಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸಾವಿನ ಬಗ್ಗೆ ಅಮೇರಿಕಾ ಪೊಲೀಸರು ತನಿಖೆ ನಡೆಸಿದ್ದು ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ, ಈ ಕುಟುಂಬದ ಸಾವಿನ ಹಿನ್ನೆಲೆಯಲ್ಲಿ ಹಲವುಯ ಅನುಮಾನಗಳು ಸೃಷ್ಟಿಯಾಗಿವೆ.
ಮೃತದೇಹಗಳನ್ನು ಸ್ವದೇಶಕ್ಕೆ ತರಿಸಿಕೊಡುವಂತೆ ಮೃತರ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.