ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ: ಚಂದ್ರಯಾನ-3 ಯಶಸ್ವಿ ಆಗಲಿದೆ, ಶ್ರಾವಣ ಮಾಸದ ಮಧ್ಯಂತರದಲ್ಲಿ... | JANATA NEWS

ಬೆಳಗಾವಿ : ಕೋಡಿಮಠದ ಡಾ.ಶಿವಾನಂದ ಸ್ವಾಮೀಜಿ ಅವರು ಮತ್ತೊಂದು ಭಯಾನಕ ಭವಿಷ್ಯವನ್ನು ನುಡಿದಿದ್ದಾರೆ.
ಭಾರತದಲ್ಲಿ ಜಲಪ್ರಳಯ ಆಗುವ ಲಕ್ಷಣಗಳಿವೆ. ಆದರೆ, ದಕ್ಷಿಣ ಭಾರತದಲ್ಲಿ ಸಮೃದ್ಧಿಯಾಗುವ ಲಕ್ಷಣಗಳಿವೆ, ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿ ಇದೆ ಎಂದು ಹೇಳಿದ್ದಾರೆ.
ಶ್ರಾವಣ ಮಾಸದ ಮಧ್ಯಂತರದಲ್ಲಿ ಜಾಗತಿಕ ಮಟ್ಟದಲ್ಲಿ ವಿಪರೀತ ಮಳೆಯಾಗಲಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಭೀತಿಯಿದೆ. ಭೂಕಂಪನಗಳು, ಸುನಾಮಿಗಳಿಂದ ಹೆಚ್ಚಿನ ಜನರ ಸಾವು ನೋವು ಸಂಭವಿಸಲಿವೆ. ವಿಷಾನೀಲ ಬೀಸುವ ಪ್ರಸಂಗವೂ ಇದೆ, ಅದು ಎಲ್ಲ ಕಡೆಯೂ ವ್ಯಾಪಿಸಲಿದೆ. ವಿಪರೀತ ಮಳೆಯಿಂದ ಎರಡು ದೇಶಗಳು ನಾಶವಾಗಲಿವೆ.
ಲೋಕಸಭೆ ಚುನಾವಣೆ ಫಲಿತಾಂಶ ಬಗ್ಗೆ ಹೇಳಲು ಇನ್ನೂ ಸಮಯವಿದೆ, ನೋಡಿ ಹೇಳುತ್ತೇವೆ. ದೈವದ ಬಲ ಮನುಷ್ಯನಿಗೆ ಮುಖ್ಯವಾಗಿ ಬೇಕು. ಯಾರು ದೈವ ನಂಬುತ್ತಾನೇಯೋ ಅಂಥವರಿಗೆ ತೊಂದರೆಯಿಲ್ಲ. ಇಲ್ಲವಾದರೆ ಆಪತ್ತು, ಸಾವುಗಳು ಸಂಭವಿಸುತ್ತವೆ. ಕೆಲವರಿಗೆ ದೈವಬಲ ಇದ್ದರೂ ತೊಂದರೆ ಆಗುತ್ತದೆ, ಪ್ರಕೃತಿ ನಿಯಮವದು ಎಂದು ಹೇಳಿದರು.
ಚಂದ್ರನ ದಕ್ಷಿಣ ಧ್ರುವದ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ಇಸ್ರೋ ಸಜ್ಜಾಗಿದೆ. ಮೊದಲ ಹಂತ ಡಿ ಬೂಸ್ಟಿಂಗ್ ಕಾರ್ಯಾಚರಣೆಯೂ ಯಶಸ್ವಿಯಾಗಿತ್ತು. ಈಗ ಎರಡು ಹಂತದ ವೇಗ ತಗ್ಗಿಸುವ ಪ್ರಕ್ರಿಯೆಯೂ ಸಕ್ಸಸ್ ಫುಲ್ ಆಗಿದೆ. ಭಾರತೀಯರ ಕನಸಿಗೆ ಇನ್ನೊಂದೇ ಹೆಜ್ಜೆ ಬಾಕಿ ಇದ್ದು, ಇದರ ಮಧ್ಯೆ ಭವಿಷ್ಯ ನುಡಿದಿರುವ ಕೋಡಿಶ್ರೀ, ಚಂದ್ರಯಾನ-3 ಯಶಸ್ವಿಯಾಗಿ ಒಳ್ಳೆಯದಾಗಲಿದೆ ಎಂದು ಹೇಳಿದ್ದಾರೆ.
ಪ್ರಾಕೃತಿಕ ದೋಷದಿಂದಲೇ ಸಾವು-ನೋವು ಹೆಚ್ಚುತ್ತಿವೆ. ಆಹಾರ ಪದ್ಧತಿಯಲ್ಲಿ ಬದಲಾವಣೆ ಆಗುತ್ತಿದೆ, ಕೆಮಿಕಲ್ ಮಿಶ್ರಿತ ಆಹಾರ ಸೇವನೆ ಹೆಚ್ಚುತ್ತಿದೆ. ಸೀಮೆ ಗೊಬ್ಬರ, ದನದ ಗೊಬ್ಬರ ಹಾಕಿ ಬೆಳೆ ಮೊದಲು ಬೆಳೆಯಲಾಗುತ್ತಿತ್ತು. ಈಗ ಕೆಮಿಕಲ್ ಸಿಂಪಡಣೆ ಹೆಚ್ಚುತ್ತಿದೆ, ಹಣ್ಣಿಗೂ ಕೆಮಿಕಲ್ ಹಾಕಲಾಗುತ್ತಿದೆ. ವಿಷವನ್ನೇ ಬಿತ್ತಿ, ವಿಷವನ್ನೇ ಬೆಳೆದು, ವಿಷವನ್ನೇ ತಿನ್ನುವಾಗ ಆರೋಗ್ಯ ವೃದ್ಧಿ ಹೇಗೆ ಸಾಧ್ಯ? ಪ್ರಕೃತಿ ಕೂಡ ಮುನಿಸಿಕೊಳ್ಳುವ ಸ್ಥಿತಿ ಇದೆ. ಗಿಡಮರಗಳನ್ನು ಮನುಷ್ಯ ನಾಶ ಮಾಡುತ್ತಿದ್ದಾನೆ. ಈ ಪ್ರಕೃತಿಯ ದೋಷ ಮನುಕುಲಕ್ಕೆ ಇದೆ. ಮೊದಲು ಅಂತರ್ಜಲ ಹೆಚ್ಚಿತ್ತು, ಈಗ ಆಳವಾಗಿ ಬೋರವೆಲ್ ಕೊರೆಸಬೇಕು. ಹೀಗಾಗಿ ಪ್ರಳಯ ಜಾಸ್ತಿ ಆಗುತ್ತಿವೆ ಎಂದು ಸ್ಫೋಟಕ ಭವಿಷ್ಯ ನುಡಿದಿದ್ದಾರೆ.