ಎನ್ಇಪಿ 2020 ರದ್ದತಿ : ಕುಲಪತಿಗಳು, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಸಿಎಂ | JANATA NEWS

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವ ವಿಶ್ವ ವಿದ್ಯಾಲಯಗಳ ಕುಲಪತಿಗಳು ಹಾಗೂ ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿ, ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು.
ಈ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್ಇಪಿ) 2020ರ ರದ್ದತಿಯ ಕುರಿತು ಮತ್ತು ರಾಜ್ಯ ಶಿಕ್ಷಣ ನೀತಿಯ ಮಾರ್ಗಸೂಚಿಗಳನ್ನು ರೂಪಿಸಲು ಸಮಿತಿಯನ್ನು ರೂಪಿಸುವ ಕುರಿತು ಚರ್ಚೆ ನಡೆಸಲಾಗಿದೆ, ಎನ್ನಲಾಗಿದೆ.
ಕಳೆದ ವಾರ, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಸರ್ಕಾರವು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಎನ್‌ಇಪಿಯನ್ನು ರದ್ದುಗೊಳಿಸಲಿದೆ ಎಂದು ಅವರು ಘೋಷಿಸಿದ್ದರು.
ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಮಧು ಬಂಗಾರಪ್ಪ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಆರ್ಥಿಕ ಇಲಾಖೆಯ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಮತ್ತಿತರ ಹಿರಿಯ ಅಧಿಕಾರಿಗಳು, ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಉಪಸ್ಥಿತರಿದ್ದರು.