ಚಂದ್ರ ಬಹಳ ದೂರದಲ್ಲಿಲ್ಲ, ಚಂದ್ರನ ಮೇಲೆ ನಾವಿದ್ದೇವೆ: ಚಂದ್ರಯಾನ-3 ಯಶಸ್ಸಿಗೆ ಪ್ರಧಾನಿ ಮೋದಿ ಶುಭಾಶಯ | JANATA NEWS

ಬೆಂಗಳೂರು : ಭಾರತದ ಚಂದ್ರಯಾನ 3 ಯಶಸ್ವಯಾಗಿದೆ. ಐತಿಹಾಸಿಕ ಕ್ಷಣಕ್ಕೆ ವಿಶ್ವ ಸಾಕ್ಷಿಯಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಭಾರ ಯಶಸ್ವಿಯಾಗಿ ವಿಕ್ರಮ್ ಲ್ಯಾಂಡರ್ ಇಳಿಸಿದೆ. ಇಸ್ರೋದ ಐತಿಹಾಸಿದ ಸಾಧನೆಗೆ ಪ್ರಧಾನಿ ಮೋದಿ ಅವರು ದಕ್ಷಿಣ ಆಫ್ರಿಕಾದಿಂದಲೇ ಶುಭಾಶಯ ತಿಳಿಸಿದರು.
ಭಾರತ ಭೂಮಿಯನ್ನು ತಾಯಿ ರೂಪದಲ್ಲಿ ನೋಡುತ್ತದೆ. ಚಂದ್ರನನ್ನು ಮಾಮಾ ಎಂದು ಕರೆಯುತ್ತೇವೆ. ಹಿಂದೆ ಮಕ್ಕಳಿಗೆ ನಾವು ಚಂದಮಾಮ ಬಹಳ ದೂರದಲ್ಲಿದ್ದಾನೆ ಎಂದು ಹೇಳುತ್ತಿದ್ದೇವು. ಆದರೆ ಇದೀಗ ಹಾಗಲ್ಲ, ಇದೀಗ ಚಂದ್ರನ ಮೇಲೆ ನಾವಿದ್ದೇವೆ. ಭಾರತ ಚಂದ್ರನ ಮೇಲೆ ಯಶಸ್ವಿಯಾಗಿ ಕಾಲಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೌತ್ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ಬಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಇಸ್ರೋ ನೇರಪ್ರಸಾರದಲ್ಲಿ ಪಾಲ್ಗೊಂಡಿದ್ದರು. ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಪ್ರಕ್ರಿಯೆಯನ್ನು ವೀಕ್ಷಿಸಿದರು. ಯಶಸ್ವಿಯಾಗಿ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಇಳಿಯುತ್ತಿದ್ದ ತಿರಂಗ ಹಾರಿಸಿದ ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದರು.
ಇಸ್ರೋ ವಿಜ್ಞಾನಿಗಳನ್ನು ಹಾಗೂ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಕ್ಷಣ ಅಭೂತಪೂರ್ವ ಎಂದು ಬಣ್ಣಿಸಿದ್ದು, ಇಸ್ರೋ ಮತ್ತು ಇಡೀ ದೇಶವನ್ನು ಅಭಿನಂದಿಸಿದ್ದಾರೆ. ಚಂದ್ರಯಾನ ಯಶಸ್ವಿ ಜನರಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ. ನಾನು ನಮ್ಮ ಜನರ ಖುಷಿಯ ಸಮಯದಲ್ಲಿ ಭಾಗಿಯಾಗಿದ್ದೇನೆ. ನಾನು ಇಸ್ರೋ ಮತ್ತು ದೇಶದ ವಿಜ್ಞಾನಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಇಸ್ರೋ ವಿಜ್ಞಾನಿಗಳು ಇತಿಹಾಸ ಸೃಷ್ಟಿಸಿದ್ದಾರೆ. ಐತಿಹಾಸ ಕ್ಷಣಕ್ಕೆ ನಾವೆಲ್ಲ ಸಾಕ್ಷಿಯಾಗಿದ್ದೇವೆ. ಈಗ ಭಾರತ ಚಂದ್ರನ ಮೇಲಿದೆ. ಚಂದ್ರಯಾನ-3 ಯಶಸ್ವಿಗೆ ಶ್ರಮಿಸಿದ ಪ್ರತಿಯೊಬ್ಬ ವಿಜ್ಞಾನಿಗೂ ಧನ್ಯವಾದಗಳು. ಈ ಯಶಸ್ಸು ಪ್ರತಿಯೊಬ್ಬ ಭಾರತೀಯನಿಗೂ ಸಲ್ಲುತ್ತದೆ. ಬಗಹುದೂರದಲ್ಲಿರುವ ಚಂದ್ರನನ್ನು ತಲುಪಲು ನಾವು ಯಶಸ್ವಿಯಾಗಿದ್ದೇವೆ. ಇಂದಿನಿಂದ ಚಂದ್ರನ ಕಥೆಗಳು ಬದಲಾಗುತ್ತದೆ ಎಂದಿದ್ದಾರೆ.
ಪ್ರತಿಯೊಬ್ಬ ಭಾರತೀಯನೂ ಇಂದು ಸಂಭ್ರಮ ಆಚರಿಸುತ್ತಿದ್ದಾನೆ. ಪ್ರತಿ ಮನೆಯೂ ಆಚರಿಸುತ್ತಿದೆ. ಈ ಹಿಂದೆ ಯಾವುದೇ ದೇಶವು (ಚಂದ್ರನ ದಕ್ಷಿಣ ಧ್ರುವ) ಅಲ್ಲಿಗೆ ತಲುಪಿಲ್ಲ. ಕಠಿಣ ಪರಿಶ್ರಮದಿಂದ ನಮ್ಮ ವಿಜ್ಞಾನಿಗಳನ್ನು ನಾವು ಅಲ್ಲಿಗೆ ತಲುಪಿದ್ದೇವೆ ಎಂದು ಮೋದಿ ಹೇಳಿದರು.
ನಾವು ಭೂಮಿಯನ್ನು ತಾಯಿ ಎಂದು ಕರೆಯುತ್ತೇವೆ. ಇನ್ನು ಚಂದ್ರನನ್ನು ಮಾಮ ಎಂದು ಕರೆಯುತ್ತಿದ್ದೇವೆ. ನಾವು ಹಿಂದೆ ಚಂದಮಾನ ಅತೀ ದೂರದಲ್ಲಿದೆ ಎಂದು ಮಕ್ಕಳಿಗೆ ಹೇಳುತ್ತಿದ್ದೇವೆ. ಆದರೆ ಇದೀಗ ಚಂದ್ರ ದೂರದಲ್ಲಿಲ್ಲ. ಅದರ ಮೇಲೆ ನಾವಿದ್ದೇವೆ ಎಂದು ಮೋದಿ ಹೇಳಿದ್ದಾರೆ.
ಚಂದ್ರಯಾನ ಮಹಾ ಮಿಶನ್ ಕೇವಲ ಚಂದ್ರನ ಮೇಲೆ ಮಾತ್ರವಲ್ಲ, ಮತ್ತಷ್ಟು ದೂರ ಸಾಗಲಿದೆ. ಬಾಹ್ಯಾಕಾಶದ ಹಲವು ಕುತೂಹಗಳನ್ನು ಹೊರತರಲು ಭಾರತ ಶ್ರಮಿಸಲಿದೆ. ಶೀಘ್ರದಲ್ಲೇ ಸೂರ್ಯನ ಅಧ್ಯಯನಕ್ಕೆ ಆದಿತ್ಯ ಉಪಗ್ರಹ ಉಡಾವಣೆ ಮಾಡಲಿದೆ. ಇದರ ಬಳಿಕ ಶುಕ್ರ ಗ್ರಹ ಕೂಡ ಇಸ್ರೋ ಅಧ್ಯಯನ ವಸ್ತುವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.