ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿಯಾದ ಶಿವರಾಮ್ ಹೆಬ್ಬಾರ್, ಭೇಟಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ! | JANATA NEWS

ಬೆಂಗಳೂರು : ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಶುಕ್ರವಾರ ರಾತ್ರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.
ಶುಕ್ರವಾರ ರಾತ್ರಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಉಭಯ ಬಿಜೆಪಿ ಶಾಸಕರು ಚರ್ಚೆ ನಡೆಸಿದ್ದಾರೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಲಕ್ಷಣಗಳು ಈಗಾಗಲೇ ಗೋಚರವಾಗುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.
ಆಪರೇಷನ್ ಹಸ್ತದ ಗಾಳಕ್ಕೆ ಸಿಲುಕಿ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವಂದತಿಗಳು ಎದ್ದಿದ್ದವು. ಈ ಕುರಿತು ಶಿವರಾಮ್ ಹೆಬ್ಬಾರ್ ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ಗೆ ಸೇರುವುದಿಲ್ಲ ಎಂದು ಹೇಳಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
ಸಿಎಂ ಜೊತೆ ಹೆಬ್ಬಾರ್ ಸುಮಾರು ಒಂದೂವರೆ ಗಂಟೆಗಳ ಕಾಲ ಚರ್ಚೆ ನಡೆಸಿದ್ದು, ಸಿಎಂ ಭೇಟಿ ವೇಳೆ ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರಾ? ಎಂಬ ಬಗ್ಗೆ ಪ್ರಶ್ನೆಗಳು ಮೂಡಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರವನ್ನು ಬರಗಾಲ ಪೀಡಿತ ಪ್ರದೇಶ ಎಂದುಇ ಘೋಷಣೆ ಮಾಡುವಂತೆ ಮನವಿ ಪತ್ರ ಸಲ್ಲಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರದಲ್ಲಿ ಶೇ 70 ಕ್ಕಿಂತ ಕಡಿಮೆ ಮಳೆ ಆಗಿರುವ ಹಿನ್ನಲೆಯಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಮನವಿ ಮಾಡಲಾಗಿದೆ. ಯಲ್ಲಾಪುರ – ಮುಂಡಗೋಡ – ಬನವಾಸಿಯನ್ನು ಬರಪೀಡಿತ ಎಂದು ಘೋಷಿಸಿ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ. ಕ್ಷೇತ್ರಕ್ಕೆ ಹೆಚ್ಚಿನ ಅನುಧಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಈ ಭಾಗದ ರೈತರು ತೊಂದರೆಗೊಳಗಾಗಿದ್ದು, ರೈತರ ಹಿತದೃಷ್ಠಿಯಿಂದ ಯಲ್ಲಾಪುರ, ಮುಂಡಗೋಡ ಮತ್ತು ಶಿರಸಿ ತಾಲೂಕಿನ ಪೂರ್ವ ಭಾಗವಾದ ಬನವಾಸಿ ಹೋಬಳಿಯನ್ನು “ಬರಗಾಲ ಪೀಡಿತ" ಪ್ರದೇಶವೆಂದು ಘೋಷಿಸುವಂತೆ ಕೋರಿದ್ದಾರೆ. ಅಲ್ಲದೆ ಜನ ಜಾನುವಾರಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಯಲ್ಲಾಪುರ ವಿಧಾನ ಸಭಾ ಕ್ಷೇತ್ರಕ್ಕೆ ಕುಡಿಯುವ ನೀರು ಪೂರೈಕೆಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಅವರು ಮನವಿ ಮಾಡಿದ್ದಾರೆ.
ಸನ್ಮಾನ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಮುಖ್ಯಮಂತ್ರಿಗಳ ನಿವಾಸದಲ್ಲಿ ಭೇಟಿಯಾಗಿ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಯಲ್ಲಾಪುರ, ಮುಂಡಗೋಡ ಹಾಗೂ ಬನವಾಸಿಯನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವಂತೆ. pic.twitter.com/rIWtf87Xj2
— Shivaram Hebbar (@ShivaramHebbar) August 26, 2023