Mon,May20,2024
ಕನ್ನಡ / English

ರಾಜ್ಯ ಬಿಜೆಪಿಯ ದಂಡನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ | JANATA NEWS

26 Aug 2023
2137

ಬೆಂಗಳೂರು : ಚಂದ್ರಯಾನ-3 ಯೋಜನೆ ಯಶಸ್ವಿಗೊಳಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ರೋಡ್ ಶೋ ನಡೆಸಿದ್ದು, ಇದರ ಕುರಿತಂತೆ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಸ್ರೋ ಕೇಂದ್ರಕ್ಕೆ ಹೋಗುವ ಮುನ್ನ ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗಿತ್ತು. ಈ ವೇಳೆ ಬಿಜೆಪಿಯ ಹಲವು ಘಟನಾನುಘಟಿ ನಾಯಕರು ರಸ್ತೆ ಬಳಿಯ ಬ್ಯಾರಿಕೇಡ್‌ ಬಳಿ ನಿಂತು ಪ್ರಧಾನಿ ಮೋದಿಯ ಆಗಮನಕ್ಕಾಗಿ ಕಾಯುತ್ತಿದ್ದು, ಅವರತ್ತ ಕೈಬೀಸಿದರು. ಆದರೆ, ಈ ವೇಳೆ ಕಂಡುಬಂದ ದೃಶ್ಯವನ್ನು ಹಂಚಿಕೊಂಡಿರುವ ಕಾಂಗ್ರೆಸ್‌ ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ ಎಂದು ಟೀಕೆ ಮಾಡಿದೆ.

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ! ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಕಾಂಗ್ರೆಸ್​ ಟ್ರೋಲ್​ ಮಾಡಿದೆ.

ಈ ಕುರಿತು ಕರ್ನಾಟಕ ಕಾಂಗ್ರೆಸ್‌ನ ಅಧಿಕೃತ ಟ್ವಿಟರ್‌ ಖಾತೆಯಿಂದ ಬಿಜೆಪಿ ನಾಯಕರನ್ನು ಲೇವಡಿ ಮಾಡಿ ಟ್ವೀಟ್‌ ಮಾಡಲಾಗಿದೆ. ಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ, ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ. ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಬಿಜೆಪಿ ನಾಯಕರನ್ನು ಕುಟುಕಿದೆ.

ರಾಜಕೀಯವಾಗಿ, ಸೈದ್ದಂತಿಕವಾಗಿ ವಿರೋಧಿಗಳಾಗಿದ್ದರೂ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ! ಪ್ರಧಾನಿ ಮುಂದೆ ಬ್ಯಾರಿಕೆಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ. ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ "ವಿರೋಧ ಪಕ್ಷದ ನಾಯಕ"ನ ಆಯ್ಕೆ ಸಾಧ್ಯವಾಗುವುದೇ? "ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ" ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದಲ್ಲ, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್‌ ಖರ್ಗೆ ಕೂಡ ಸಾಮಾಜಿಕ ಜಾಲತಾಣದ (ಟ್ವೀಟ್‌) ಮೂಲಕ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್​ ಮುಖಂಡ ಹಾಗೂ ಮಾಜಿ ಎಂಎಲ್​ಸಿ ರಮೇಶ್​ ಬಾಬು ಸಹ ಟ್ವೀಟ್​ ಮಾಡಿದ್ದು, ಇಂಥ ದುರಂತವನ್ನು ನೀವು ಸರ್ವಾಧಿಕಾರಿ ಆಡಳಿತದಲ್ಲಿ ಮಾತ್ರ ನೋಡಲು ಸಾಧ್ಯ. ಮೋದಿ ಭೇಟಿ ವೇಳೆ ರಾಜ್ಯ ಬಿಜೆಪಿ ನಾಯಕರನ್ನೂ ಸಹ ನಾಯಿಗಿಂತ ಕಡೆಯಾಗಿ ನೋಡಲಾಗಿದೆ. ಬಿಜೆಪಿ, ಆರ್​ಎಸ್​ಎಸ್​ನಲ್ಲಿ ಆತ್ಮಾಭಿಮಾನ ಸಂಸ್ಕೃತಿ ಕಳೆದು ಹೋಗಿದೆ. ಜೈ ಮೋದಿ ಎಂದು ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ.

RELATED TOPICS:
English summary :State BJPs warlords, emperors and emperors are on the streets

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...