ಬಿಬಿಎಂಪಿ ಲ್ಯಾಬ್ ನಲ್ಲಿ ಅಗ್ನಿ ಅವಘಡ ಪ್ರಕರಣ, ಚಿಕಿತ್ಸೆ ಫಲಿಸದೆ ಬಿಬಿಎಂಪಿ ಎಇ ವಿಧವಶ | JANATA NEWS

ಬೆಂಗಳೂರು : ಬಿಬಿಎಂಪಿ ಲ್ಯಾಬ್‌ನಲ್ಲಿ ಬೆಂಕಿ ಪ್ರಕರಣದಲ್ಲಿ ಗಂಭಿರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ಎಇ ಶಿವಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾರೆ.
ಅಗ್ನಿ ಅವಘಡದ ವೇಳೆ ರಾಸಾಯನಿಕ ಗಾಳಿ ಉಸಿರಾಡಿದ ಪರಿಣಾಮ ತೀವ್ರತರ ಉಸಿರಾಟ ಸಮಸ್ಯೆಯಿಂದ ಶಿವಕುಮಾರ್ ಬಳಲುತ್ತಿದ್ದು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಶೇಷಾದ್ರಿಪುರದ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಮುಖ್ಯ ಇಂಜಿನಿಯರ್ ಅವರ ಆರೋಗ್ಯ ವಿಚಾರಿಸಿದ ಬಳಿಕ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು "ನಾನು ಈ ಹಿಂದೆ ಮುಖ್ಯ ಇಂಜಿನಿಯರ್ ಶಿವಕುಮಾರ್ ಅವರ ಆರೋಗ್ಯ ವಿಚಾರಿಸಲು ಭೇಟಿ ಮಾಡಿದಾಗ ಅವರ ಆರೋಗ್ಯ ಸುಧಾರಿಸುತ್ತಿರುವಂತೆ ಕಂಡಿತ್ತು. ಅವರಿಗೆ ಉತ್ತಮ ಚಿಕಿತ್ಸೆ ಕೊಡಿಸಬೇಕು ಎಂಬ ಕಾರಣಕ್ಕೆ ಈ aಪ್ರತಿಷ್ಠಿತ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾನು ಕೂಡ 2-3 ಬಾರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದೆ. ಇಲ್ಲಿನ ವೈದ್ಯರು ಎಲ್ಲಾ ರೀತಿಯ ಚಿಕಿತ್ಸೆ ನೀಡಿ ಅವರ ಆರೋಗ್ಯ ಸುಧಾರಿಸಲು ಪ್ರಯತ್ನಿಸುತ್ತಿದ್ದಾರೆ. ಮತ್ತೊರ್ವ ಸಿಬ್ಬಂದಿ ಜ್ಯೋತಿ ಅವರಲ್ಲಿ ಚೇತರಿಕೆ ಕಾಣುತ್ತಿದ್ದು, ಸುಟ್ಟ ಗಾಯಗಳಿವೆ" ಎಂದು ತಿಳಿಸಿದ್ದರು.