Tue,Aug04,2026
ಕನ್ನಡ / English

ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭ ಸಿದ್ಧತೆಗಳ ಪರಿಶೀಲನೆ ನಡೆಸಿದ ಡಿಸಿಎಂ, ಸಚಿವೆ ಹೆಬ್ಬಾಳ್ಕರ್ | JANATA NEWS

28 Aug 2023

ಮೈಸೂರು : ಆಗಸ್ಟ್ 30 ರಂದು ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭ ನಡೆಯಲಿರುವ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಸಿದ್ಧತೆಗಳನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಾರಂಭದ ಸಿದ್ಧತೆ ಬಗ್ಗೆ ಬೃಹತ್ ವೇದಿಕೆ ಮೂಲಕ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಇದಕ್ಕೂ ಮೊದಲು ಚಾಮರಾಜನಗರದ ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ‌.ರಾಜ್ ಕುಮಾರ್ ರಂಗಮಂದಿರದಲ್ಲಿ ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಬುಧವಾರ (ಆಗಸ್ಟ್30) ಏಕಕಾಲದಲ್ಲಿ ರಾಜ್ಯದ 13 ಸಾವಿರ ಕಡೆ ಯೋಜನೆಗೆ ಚಾಲನೆ ಸಿಗಲಿದೆ ಎಂದರು.

ನಮ್ಮ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸರ್ಕಾರ ರಚನೆಯಾದ 100 ದಿನಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಬಸವ, ಗಾಂಧಿ, ಅಂಬೇಡ್ಕರ್ ತತ್ವದಡಿ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾರಥ್ಯದಲ್ಲಿ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ನಮ್ಮ ಇಲಾಖೆಯಲ್ಲಿ ಸಾಕಷ್ಟು ಕೆಲಸಗಳಿವೆ. ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ಕ ಬಳಿಕ ಇಲಾಖೆಯ ಕೆಲಸ ಕಾರ್ಯಗಳಿಗೆ ವೇಗ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

RELATED TOPICS:
English summary :DCM, Minister Hebbalkar inspected the preparations for the launching ceremony of Grilahakshmi Yojana

 ದೆಹಲಿ ಪೊಲೀಸ್ ಕ್ರಮವನ್ನು ಸಮರ್ಥಿಸಿಕೊಂಡ ದೆಹಲಿ ಪೊಲೀಸ್ ಮಹಾಸಂಘ; ರಾಜಕೀಯ ನಿರ್ದೇಶನದ ಆರೋಪ ಸುಳ್ಳು

ಪ್ರತಿಭಟನೆಯ ವೇಳೆ ನಡೆದ ಸಂಘರ್ಷದಲ್ಲಿ ಗಾಯಗೊಂಡ ದೆಹಲಿ ಪೊಲೀಸ್ ಸಿಬ್ಬಂದಿಯ ಕುಟುಂಬಗಳಿಂದ ನ್ಯಾಯಕ್ಕಾಗಿ ಆಗ್ರಹ

ಸಿಜೆಪಿ ಕಾನೂನು ಬೆಂಬಲಕ್ಕೆ ನಿಂತ ಕಪಿಲ್ ಸಿಬಲ್ ಶಿಕ್ಷಣ ಮಂತ್ರಿಯಾಗಿದ್ದಾಗ ಹೆಚ್ಚು ಪೇಪರ್ ಲೀಕ್ - ಬಿಜೆಪಿಯ ಸುಧಾಂಶು ತ್ರಿವೇದಿ

ಸಂಸತ್ತಿನಲ್ಲಿ ಆಧಾರರಹಿತ ಹೇಳಿಕೆ : ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕೆಂದು ಎನ್‌ಡಿಎ ಸಂಸದರ ಆಗ್ರಹ

ಪಿಒಜೆಕೆಯಲ್ಲಿ ನಾಗರಿಕರ ಮೇಲೆ ಗುಂಡಿನ ಸುರಿಮಳೆ ಖಂಡಿಸಿ, ಪಾಕಿಸ್ತಾನ ಬೆಂಬಲಿತ ಚುನಾವಣೆಗಳನ್ನು ತೋರಿಕೆಯ ವ್ಯಾಯಾಮ ಎಂದ ಭಾರತ

6 ಪ್ರಶ್ನೆ ಪತ್ರಿಕೆಗಳ ಸೋರಿಕೆ : ಪಂಜಾಬ್ ಸಚಿವರ ರಾಜೀನಾಮೆಗೆ ಎನ್‌ಡಿಎ ಸಂಸದರ ಆಗ್ರಹ; ಸಂಸತ್ತಿನಲ್ಲಿ ರಾಜಕೀಯ ಜಟಾಪಟಿ

ಪರೀಕ್ಷಾ ಸುಧಾರಣೆಗಳ ಕುರಿತು ಉನ್ನತ ಅಧಿಕಾರದ ಕಾರ್ಯಪಡೆ ಘೋಷಿಸಿದ ಪ್ರಧಾನಿ ಮೋದಿ : ನೇತೃತ್ವ ವಹಿಸಲು ನಂದನ್ ನಿಲೇಕಣಿ ಆಯ್ಕೆ

ಅಣೆಕಟ್ಟುಗಳ ಹೂಳೆತ್ತುವಿಕೆ, ಮೇಕೆದಾಟು ಮತ್ತು ಮಹದಾಯಿ ಯೋಜನೆಗಳಿಗೆ ಕೇಂದ್ರದ ಬೆಂಬಲದ ಭರವಸೆ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಗದ್ದಲ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಮಸೂದೆ ಮೇಲಿನ ಚರ್ಚೆ ಮುಂದೂಡಿಕೆ

 ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪ: ಕುನಾಲ್ ಕಮ್ರಾ, ವಾಂಗ್‌ಚುಕ್ ಮತ್ತು ಡಿಪ್ಕೆ ವಿರುದ್ಧ ದೂರು ದಾಖಲು

ಪ್ರಶ್ನೆ ಪತ್ರಿಕೆ ಸೋರಿಕೆ ಆದರೆ ಜಿಲ್ಲಾಧಿಕಾರಿಗಳೇ ಹೊಣೆ ಎನ್ನುವುದು ಹೊಣೆಗೇಡಿತನ - ಶಾಸಕ ಯತ್ನಾಳ್

ರಾಜನಾಥ್ ಸಿಂಗ್ - ಪಾಕಿಸ್ತಾನದೊಂದಿಗೆ ಮಾತುಕತೆ ಪಿಒಕೆ ಬಗ್ಗೆ ಮಾತ್ರ; ಭಯೋತ್ಪಾದಕರು ಮತ್ತು ಭಯೋತ್ಪಾದನೆ ಪ್ರಾಯೋಜಿಸುವ ದೇಶ ಒಂದೇ

ನ್ಯೂಸ್ MORE NEWS...