ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗು ಸುಪ್ರೀಂಕೋರ್ಟ್ ಮುಂದೆ ವಾಸ್ತವ ಸ್ಥಿತಿಗತಿ ಮಂಡನೆ | JANATA NEWS

ವಿಜಯಪುರ : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುವ ಕುರಿತು ರಾಜ್ಯದ ವಾಸ್ತವ ಸ್ಥಿತಿಗತಿಗಳನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಮತ್ತು ಸುಪ್ರೀಂ ಕೋರ್ಟ್ನ ಮುಂದಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಕೃಷ್ಣಾ ನದಿಗೆ ಗಂಗಾ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಂತರ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಲಮಟ್ಟಿಯ ಸಂಗ್ರಹಣೆ ಮಟ್ಟ 519.6 ಮೀಟರ್ ಅಡಿ ಇದೆ. ಅದರ ಒಟ್ಟು ಸಂಗ್ರಹಣೆ 123.08 ಟಿ.ಎಂಸಿ. ಒಂದು ಟಿಎಂಸಿ ನೀರು ಎಂದರೆ 11 ಸಾವಿರ ಕ್ಯೂಸೆಕ್ಸ್ ನೀರು. ಇಡೀ ಕರ್ನಾಟಕದ ಜಲಾಶಯಗಳಲ್ಲಿ ಕೃಷ್ಣಾ ಮೇಲ್ದಂಡೆ ಪೂರ್ಣ ಭರ್ತಿಯಾಗಿದೆ. ನಾರಾಯಣಪುರ ಜಲಾಶಯ ತುಂಬಿದೆ.
ಭರ್ತಿಯಾಗಿರುವುದರಿಂದ ನಾಲೆಗಳಿಗೆ, ಕುಡಿಯುವ ನೀರು, ವಿದ್ಯುಚ್ಛಕ್ತಿ ಉತ್ಪಾದನೆಗೆ ನೀರು ಹರಿಸಲಾಗುತ್ತಿದೆ. ಕುಡಿಯುವ ನೀರು ಬಿಟ್ಟಿರುವುದರಿಂದ ಒಂದು ಟಿಎಂಸಿ ನೀರು ಕಡಿಮೆ ಇದೆ. ನಾರಾಯಣಪುರದಲ್ಲಿಯೂ ಕೂಡ 492 ಮೀ. ನೀರು ಇದೆ. 105.46 ಟಿಎಂಸಿ ನೀರು ಲೈವ್ ಸ್ಟೋರೇಜೆ ಇದೆ. ಕಳೆದ ವರ್ಷಕ್ಕೆ ಹೋಲಿಸಿದರೆ 11 ಟಿಎಂಸಿ ನೀರಿನ ಸಂಗ್ರಹ ಕಡಿಮೆ ಇದೆ. ಕಳೆದ ವರ್ಷ ಒಳಹರಿವು ಹೆಚ್ಚಿತ್ತು.25450 ಕ್ಯೂಸೆಕ್ಸ್ ನೀರಿತ್ತು , ಆದರೆ ಈಗ 3730 ಕ್ಯೂಸೆಕ್ಸ್ ನೀರಿನ ಸಂಗ್ರಹ ಇದೆ ಎಂದರು.
ಒಟ್ಟಾರೆಯಾಗಿ ಈ ವರ್ಷ ಕೃಷ್ಣಾ ಮೇಲ್ದಂಡೆ ಪ್ರದೇಶದ ಅಚ್ಚುಕಟ್ಟಿನಲ್ಲಿ ಮಳೆ ಕಡಿಮೆಯಾಗಿದೆ. ಈ ವರ್ಷ ರಾಜ್ಯದಲ್ಲಿ ಜೂನ್ ತಿಂಗಳಲ್ಲಿ ಮಳೆ ಕಡಿಮೆಯಾಗಿದೆ. ಶೇ. 56% ಕೊರತೆಯಾಗಿದೆ. ಆಗಸ್ಟ್ ನಲ್ಲಿಯೂ ಕೊರತೆ ಕಂಡು ಬಂದಿದ್ದು, ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಈಗಾಗಲೇ ಮೂರು ಸಭೆಗಳನ್ನು ನಡೆಸಿದೆ. ಪುನ: ಸೆ.04 ರಂದು ಮತ್ತೊಂದು ಸಭೆ ನಡೆಯಲಿದೆ. 113 ತಾಲ್ಲೂಕುಗಳಲ್ಲಿ ಬರಗಾಲ ಇದೆ ಎಂದು ಜಂಟಿ ಸಮೀಕ್ಷೆ ನಡೆಸಿದ್ದಾರೆ. ಇದಲ್ಲದೆ 73 ತಾಲ್ಲೂಕುಗಳಲ್ಲಿ ಬರಗಾಲ ಉಂಟಾಗಿದೆ ಎಂದು ಹೇಳಿದ್ದಾರೆ. ಅದಕ್ಕೂ ಜಂಟಿ ಸಮೀಕ್ಷೆ ನಡೆಸಿ ವರದಿ ಬಂದ ನಂತರ ತೀರ್ಮಾನ ಕೈಗೊಳ್ಳಲಾಗಿದೆ. ಸೆ.4 ರಂದು ಒಂದು ತೀರ್ಮಾನಕ್ಕೆ ಬರಲಾಗುವುದು ಎಂದರು.
ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡುವುದರ ಜೊತೆಗೆ ಬಾಕಿಯಿರುವ ಎಲ್ಲಾ ಯೋಜನೆಗಳ ಅನುಮೋದನೆಗಾಗಿ ಸರ್ವ ಪಕ್ಷ ನಿಯೋಗವೊಂದನ್ನು ಕೊಂಡೊಯ್ಯಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಅಪಾಯಿಂಟ್ಮೆಂಟ್ ಕೇಳಿದಿರುವುದಾಗಿ ಳಿಸಿದರು. ತಮಿಳುನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿಯು ಹೇಳಿದ್ದರೂ ನೀರು ಹರಿಸಲು ನಮಗೆ ನೀರಿನ ಕೊರತೆಯಿದೆ. ಮೊದಲು 15,000 ಕ್ಯೂಸೆಕ್ ನೀರು ಹರಿಸಬೇಕೆಂದು ಸೂಚಿಸಿದ್ದರು.
ಆದರೆ, ನಂತರ ನಾವು ಮನವಿ ಮಾಡಿದ ನಂತರ10,000 ಕ್ಯೂಸೆಕ್ಗೆ ಇಳಿಸಿದರು, ಈಗ ಮತ್ತೆ ರಾಜ್ಯದ ಮನವಿಯ ನಂತರ 5,000 ಕ್ಯೂಸೆಕ್ಗೆ ನೀರು ಬಿಡಬೇಕು ಎಂದು ಆದೇಶಿಸಿರುವುದಾಗಿ ಮಾಹಿತಿ ನೀಡಿದರು.
ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಈಗಾಗಲೇ ರಾಜ್ಯದ ಕಾನೂನು ತಂಡವನ್ನು ಭೇಟಿ ಮಾಡಿದ್ದಾರೆ ಮತ್ತು ನೆಲದ ವಾಸ್ತವಗಳ ಬಗ್ಗೆ ಅವರಿಗೆ ಅರಿವು ಮೂಡಿಸಿದ್ದಾರೆ ಮತ್ತು ರಾಜ್ಯದ ವಾದದ ಮಾರ್ಗ ಹೇಗಿರಬೇಕು ಎಂಬುದರ ಕುರಿತು ಅವರಿಗೆ ಅಗತ್ಯ ಸೂಚನೆ ನೀಡಿದ್ದಾರೆ. ಬುಧವಾರ ಸುಪ್ರೀಂಕೋರ್ಟ್ ಈ ಕುರಿತು ವಿಚಾರಣೆ ನಡೆಯಲಿದೆ. ಪ್ರಧಾನಮಂತ್ರಿಯವರ ಅಪಾಯಿಂಟ್ಮೆಂಟ್ ಸಿಕ್ಕ ನಂತರ ಕೃಷ್ಣಾ ಮೇಲ್ದಂಡೆ ಯೋಜನೆಗೆ ಗೆಜೆಟ್ ನೋಟಿಫಿಕೇಶನ್, ಮಹದಾಯಿ ಯೋಜನೆಗೆ ಪರಿಸರ ಮತ್ತು ಅರಣ್ಯ ಇಲಾಖೆ ಅನುಮತಿ, ಕಾವೇರಿ ನದಿಯಾದ್ಯಂತ ಮೇಕೆದಾಟು ಸಮತೋಲಿತ ಜಲಾಶಯ ಯೋಜನೆ ಅನುಷ್ಠಾನಕ್ಕೆ ಅಗತ್ಯ ಅನುಮತಿ ನೀಡುವಂತೆ ಒತ್ತಾಯಿಸಲಾಗುವುದು ಎಂದರು.
ಮುಖ್ಯಮಂತ್ರಿ @siddaramaiah ಅವರು ಇಂದು ಆಲಮಟ್ಟಿಯಲ್ಲಿ ಕೃಷ್ಣೆಯ ಜಲಧಿಗೆ ಗಂಗಾಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ @DKShivakumar, ಸಚಿವರಾದ @MBPatil ಸೇರಿದಂತೆ ಹಲವು ನಾಯಕರು ಈ ವೇಳೆ ಉಪಸ್ಥಿತರಿದ್ದರು. pic.twitter.com/9hh3l8iXij
— CM of Karnataka (@CMofKarnataka) September 2, 2023