ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ಮಹಿಳೆಯ ಸಾವು | JANATA NEWS

ಬೆಂಗಳೂರು : ನವ ವಿವಾಹಿತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಕೃಷ್ಣವೇಣಿ (26) ಸಾವನ್ನಪ್ಪಿರುವ ನವವಿವಾಹಿತೆ. ಮೂರು ತಿಂಗಳ ಹಿಂದಷ್ಟೆ ಕೃಷ್ಣವೇಣಿಯನ್ನ ಕೋಲಾರ ಮೂಲದ ಪೃಥ್ವಿರಾಜ್ (30)ಗೆ ವಿವಾಹ ಮಾಡಿಕೊಡಲಾಗಿತ್ತು.
ಕೃಷ್ಣವೇಣಿ ಕುಟುಂಬದವರು ಕತ್ತು ಹಿಸುಕಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಅಂತಾ ಆರೋಪಿಸುತ್ತಿದ್ದಾರೆ. ಮದುವೆಯಾದ ಎರಡು ತಿಂಗಳಿಗೆ ಕಿರಿಕ್ ಶುರುಮಾಡಿದ್ದ. ಮದುವೆಯಾದ ಮೂರು ತಿಂಗಳಿಗೆ ನಾಲ್ಕೈದು ಬಾರಿ ಜಗಳ ಮಾಡಿ ತವರಿಗೆ ಕಳುಹಿಸಿದ್ದ ಎಂದು ಆರೋಪಿಸಿದ್ದಾರೆ.
ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
English summary :Death of a woman who was married three months ago