Thu,Dec11,2025
ಕನ್ನಡ / English

ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ...ಮಹಿಷ ದಸರಾ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ : ಸಿಎಂಗೆ ಸಂಸದರ ಮನವಿ | JANATA NEWS

08 Sep 2023

ಮೈಸೂರು : ಅಧಿಕಾರದಲ್ಲಿ ಯಾರೆ ಇರಲಿ, ಆದರೆ ಮೈಸೂರಿನ ಅಧಿದೇವತೆ ತಾಯಿ ಚಾಮುಂಡಿ ಅವಳಿಗೆ ಅನಾಚಾರ ಮಾಡಲಿಕ್ಕೆ ಯಾರೆ ಅಧಿಕಾರದಲ್ಲಿದ್ದವರು ಪ್ರಯತ್ನ ಮಾಡಿದರೂ ನಾನು ಬಿಡಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಸಂಸದ ಸಿಂಹ ನೇರ ಸವಾಲು ಹಾಕಿದ್ದಾರೆ.

ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ ಮರುಕಳಿಸದಂತೆ ನೋಡಿಕೊಳ್ಳಿ, ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

ಸಾರ್ ಸಿದ್ದರಾಮಯ್ಯ ಅವರೇ, ನೀವು ಹಿಂದೆ ಮುಖ್ಯಮಂತ್ರಿ ಆದಾವಾಗ ಮಹಿಷ ದಸರಾ ಎಂಬ ಅನಾಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದೀರಿ. ದಯವಿಟ್ಟು ಆ ಅನಾಚಾರ, ಅಪದ್ದ ಮರುಕಳಿಸದಂತೆ ನೋಡಿಕೊಳ್ಳಿ ಸಾರ್. ನಿಮ್ಮ ಮೈತ್ರಿಯ ಡಿಎಂಕೆ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತೊಂದು ರೋಗಗಳಿಗೆ ಹೊಲಿಸುತ್ತಾರೆ, ನಿಮಗೆ ನಂಬಿಕೆ ಇಲ್ಲಾ ಅಂದರೆ ಪರವಾಗಿಲ್ಲ ಸಾರ್, ಮೈಸೂರಿನವರಿಗೆ ತಾಯಿ ಚಾಮುಂಡಿ ಮೇಲೆ ನಂಬಿಕೆ ಇದೆ. ಆ ನಂಬಿಕೆಯನ್ನು ಒಡೆಯುವ ಕೆಲಸ ಮಾಡಬೇಡಿ. ನಿಮ್ಮ ಮನೆಯಲ್ಲಿ ಯಾರ ಫೋಟೋ ಬೇಕಾದರೂ ಇಟ್ಟಿಕೊಳ್ಳಿ, ಎಂದು ಹೇಳಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಷ ದಸರಾ ಅಚರಣೆ ಮಾಡಲು ಬಿಡುವುದಿಲ್ಲ. ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಬೇಡ. ಚಾಮುಂಡೇಶ್ವರಿ ಬೆಟ್ಟದಲ್ಲಿ ಈ ಕೆಲಸ ಬೇಡ. ನಾನು ಅವತ್ತು ಇಡೀ ದಿನ ಇಲ್ಲಿಯೇ ಇರುತ್ತೇನೆ. ಯಾವ ರೀತಿ ಮಹಿಷ ದಸರಾ ಆಚರಣೆ ಮಾಡುತ್ತಾರೆ ನೋಡ್ತೀನಿ ಎಂದು ಮೈಸೂರು ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ತಮ್ಮ ಮನೆಯಲ್ಲಿ ಮಹಿಷನ ಪೋಟೋ ಇಟ್ಟು ಬೇಕಾದರೆ ಪೊಜೆ ಮಾಡಿಕೊಳ್ಳಲಿ. ಅದರ ಜೊತೆ ಮಹಿಷನಂತ ಮಗ ತಮಗೆ ಹುಟ್ಟಲಿ ಅಂತ ಸಹ ಬೇಡಿಕೊಳ್ಳಲಿ. ಯಾರು ಇದನ್ನು ಮಹಿಷ ಬೆಟ್ಟ ಅಂತಾ ಹೇಳುವುದಿಲ್ಲ, ಇದನ್ನು ಚಾಮುಂಡಿ‌ ಬೆಟ್ಟ ಅಂತಾನೇ ಕರೆಯುವುದು. ನಾವು ದೇವರ ಮೇಲೆ ನಂಬಿಕೆ ಭಕ್ತಿ ಇರುವರು. ಈ ವಿಚಾರದಲ್ಲಿ ಯಾವುದೇ ಸಂಘರ್ಷಕ್ಕೆ ನಾನು ಸಿದ್ಧ. ಮಹಿಷ ದಸರಾ ಅಚರಣೆ ದಿನ ನಾನೇ ಬೆಟ್ಟದಲ್ಲಿ ಇರುತ್ತೇನೆ. ಯಾವ ರೀತಿ ಅಚರಣೆ ಮಾಡುತ್ತಾರೆ ನೋಡುತ್ತೇವೆ ಎಂದು ಹೇಳಿದರು.

English summary : It doesnot matter if you donot believe...Make sure that Mahisha Dussehra atrocities donot recur: MP appeals to CM

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ
 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ
 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಎಸ್ಐಆರ್, ಸಂಚಾರ ಸಾಥಿ - ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ
ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...