Thu,Sep28,2023
ಕನ್ನಡ / English

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ, ಸುಪ್ರೀಂ ಕೋರ್ಟ್ ನಲ್ಲಿ ಮನವಿ - ಸಿಎಂ ಸಿದ್ದರಾಮಯ್ಯ | JANATA NEWS

13 Sep 2023
363

ಬೆಂಗಳೂರು : ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸುತ್ತೇವೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ತಮಿಳುನಾಡಿಗೆ ಇನ್ನೂ 15 ದಿನ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸೂಚಿಸಿರುವ ಹಿನ್ನೆಲೆಯಲ್ಲಿ ಇಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವ ಪಕ್ಷ ಸಭೆ ಕರೆಯಲಾಗಿತ್ತು.

ಕಳೆದ 123 ವರ್ಷಗಳಲ್ಲೇ ರಾಜ್ಯ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ತೀವ್ರ ಮಳೆ ಕೊರತೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ಈ ಸಂಬಂಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ವ ಪಕ್ಷ ಸಭೆ ಬಳಿಕ ಹೇಳಿದ್ದಾರೆ.

ರಾಜ್ಯದಲ್ಲಿ ಬರ ಇದೆ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಕೊರತೆಯಾಗಿದೆ. ಡ್ಯಾಂಗಳಲ್ಲಿ ನೀರಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗುವ ಸಾಧ್ಯತೆ ಇದೆ. ಇಂತಹ ಸಂದಿಗ್ಥ ಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ವಿಧಾನಸೌಧದಲ್ಲಿ ನಡೆದ ಸರ್ವಪಕ್ಷ ಸಭೆ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಿತ್ಯ 5000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ(CWRC) ನೀಡಿರುವ ಆದೇಶವನ್ನು ಮರು ಪರಿಶೀಲನೆ ಮಾಡುವಂತೆ ಮನವಿ ಮಾಡಲು ನಿರ್ಧರಿಸಿದ್ದೇವೆ. ವಸ್ತುಸ್ಥಿತಿ ವಿವರಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೆ ಪತ್ರ ಬರೆಯುತ್ತೇವೆ, ಎಂದು ಸಿಎಂ ತಿಳಿಸಿದರು.

English summary : Canot release water to Tamil Nadu, petition in Supreme Court - CM Siddaramaiah

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...