ಪತ್ನಿಯ ಕಾಟಕ್ಕೆ ಬೇಸತ್ತು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರ್ | JANATA NEWS
ತುಮಕೂರು : ಪತ್ನಿಯ ಕಾಟಕ್ಕೆ ಬೇಸತ್ತು ಅಣ್ಣನಿಗೆ ಆಡಿಯೋ ಮೆಸೇಜ್ ಕಳುಹಿಸಿ ಎಂಜಿನಿಯರ್ ಆತ್ಮಹತ್ಯೆಗೆ ಶರಣಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ಮಂಜುನಾಥ್ (38) ನೇಣುಬಿಗಿದುಕೊಂಡು ಸಾವಿಗೆ ಶರಣಾದ ದುರ್ದೈವಿ. ಇವರು ಬೆಂಗಳೂರಿನ ಬಿಎಂಆರ್ಸಿಎಲ್ನಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು.
ಕಳೆದ 10 ವರ್ಷದ ಹಿಂದೆ ತುರುವೇಕೆರೆ ಮೂಲದ ಪ್ರಿಯಾಂಕಾಳನ್ನು ಮದುವೆಯಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದರು.
ಮದುವೆ ನಂತರ ಮಂಜುನಾಥ್‍ಗೆ ಪತ್ನಿ ಪವಿತ್ರಾ ಮಾನಸಿಕ ಕಿರುಕುಳ ನೀಡಿದ್ದಳು. ಇದರಿಂದ ಮನನೊಂದು ಮಂಜುನಾಥ್ ಕೆಬಿ ಕ್ರಾಸ್ ನ ಕುದ್ರುಪಾಳ್ಯದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೂ ಮುನ್ನ ತನ್ನ ಸಹೋದರನಿಗೆ ಆಡಿಯೋ ಮೆಸೇಜ್ ಕಳುಹಿಸಿದ್ದು, ನನಗೆ ಅವಳ ಜತೆ ಜೀವನ ಮಾಡುವುದಕ್ಕೆ ಆಗುತ್ತಿಲ್ಲ. ಆ ಮನೆಹಾಳಿಯಿಂದ ನಾನು ಸಾಯ್ತಾ ಇದ್ದೀನಿ. ನನ್ನ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ಮಂಜುನಾಥ್ ಮೆಸೇಜ್ ಮಾಡಿದ್ದಾರೆ.
ಆರೋಪಿ ಪತ್ನಿ ಪ್ರಿಯಾಂಕಾ ವಿರುದ್ಧ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.