Mon,May20,2024
ಕನ್ನಡ / English

ಚೆಫ್ ಟಾಕ್ ಎಂಬ ಕಂಪನಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಹಾರ ಪೂರೈಕೆ, ಚೈತ್ರಾ ಕುಂದಾಪುರ ಸ್ಪೋಟಕದ ಹೇಳಿಕೆ | JANATA NEWS

14 Sep 2023
1213

ಬೆಂಗಳೂರು : 2017ರಿಂದಲೇ ಚೆಫ್ ಟಾಕ್ ಎಂಬ ಕಂಪನಿ ಅಡಿಯಲ್ಲಿ ಇಂದಿರಾ ಕ್ಯಾಂಟೀನ್​ಗೆ ಆಹಾರ ಪೂರೈಕೆ ಮಾಡಲಾಗುತ್ತಿದೆ. ಹಾಗಾಗಿ ಚೈತ್ರಾ ಕುಂದಾಪುರ ಹೇಳಿಕೆ ಸಂಚಲನ ಸೃಷ್ಟಿಸಿದೆ.

ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಯಿಂದ 5 ಕೋಟಿಗೂ ಹೆಚ್ಚು ಹಣ ಪಡೆದು ವಂಚಿಸಿದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತೆಯಾಗಿರುವ ಚೈತ್ರಾ ಕುಂದಾಪುರ‌ ಮಹಿಳಾ ಸಾಂತ್ವನ ಕೇಂದ್ರದಿಂದ ಇಂದು ಸಿಸಿಬಿ ಕಚೇರಿಗೆ ಕರೆದುಕೊಂಡು ಬರುವಾಗ, ಸ್ವಾಮೀಜಿ ಬಂಧನ ಬಳಿಕ ದೊಡ್ಡವರ ಹೆಸರು ಕೂಡ ಬಹಿರಂಗವಾಗಲಿದೆ.‌

ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಯಿದೆ. ಅದಕ್ಕಾಗಿಯೇ ಈ ತರ ಷಡ್ಯಂತ್ರ ರೂಪಿಸಿದ್ದಾರೆ ಎಂದು ಪರೋಕ್ಷವಾಗಿ ಉದ್ಯಮಿ ಗೋವಿಂದ ಬಾಬು ಪೂಜಾರಿ ವಿರುದ್ಧ ಕಿಡಿಕಾರಿದ್ದಾರೆ. ಇದು ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ.

ಈ ಐದು ಕೋಟಿ ರೂಪಾಯಿ ವಂಚನೆಗೂ ಮತ್ತು ಇಂದಿರಾ ಕ್ಯಾಂಟೀನ್ ಬಿಲ್​ಗೂ ಏನು ಸಂಬಂಧ ಎಂಬುವುದು ತನಿಖೆಯಲ್ಲಿ ತಿಳಿದು ಬರಬೇಕಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಲಾಗಿತ್ತು. ಈ ಸಂಬಂಧ ಐದು ಕೋಟಿ ರೂಪಾಯಿ ವಂಚಿಸಲಾಗಿದೆ ಎಂದು ಆರೋಪಿಸಿರುವ ಪೂಜಾರಿ ಅವರು ಒಟ್ಟು ಎಂಟು ಮಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಪೂಜಾರಿಯವರು ಕಂತುಗಳಲ್ಲಿ ಹಣ ಪಾವತಿಸಿದ್ದು, ಅದರಲ್ಲಿ ಒಂದನ್ನು ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿ ಅವರಿಗೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಚೈತ್ರಾ ಕುಂದಾಪುರ ಅವರು ದೂರುದಾರರನ್ನು ಮಠಕ್ಕೆ ಕರೆದೊಯ್ದು ಶ್ರೀಗಳಿಗೆ ಪರಿಚಯಿಸಿದರು ಎನ್ನಲಾಗಿದೆ.

ಆರೋಪಿ ಚೈತ್ರಾ ಕುಂದಾಪುರ ಇಂದಿರಾ ಕ್ಯಾಂಟೀನ್ ಬಿಲ್ ಬಾಕಿಗೆ ಷಡ್ಯಂತ್ರ ಹೇಳಿಕೆ‌ಗೆ ಸಂಬಂಧಿಸಿದಂತೆ ಬಿಬಿಎಂಪಿ‌ ಚೀಫ್ ಕಮಿಷನರ್ ತುಷಾರ್ ಗಿರಿ ನಾಥ್ ಸ್ಪಷ್ಟನೆ ನೀಡಿದ್ದಾರೆ. ಬಿಬಿಎಂಪಿ ಇಂದಿರಾ ಕ್ಯಾಂಟೀನ್ ಬಿಲ್ ಬಾಕಿ ಬಹುತೇಕ ಕ್ಲಿಯರ್ ಮಾಡಲಾಗಿದೆ. ಕೆಲವು ಸಣ್ಣ ಪುಟ್ಟ ಬಿಲ್ ಬಾಕಿ ಇರಬೇಕು, ಅದನ್ನು ಹೆಲ್ತ್ ಕಮಿಷನರ್​ಗೆ ನೋಡಿಕೊಳ್ಳಲು ಹೇಳಿದ್ದೇನೆ ಎಂದಿದ್ದಾರೆ.

ಇಂದಿರಾ ಕ್ಯಾಂಟೀನ್ ಬಾಕಿ ಬಗ್ಗೆ‌ ಚೈತ್ರಾಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ದೂರುದಾರ ಗೋವಿಂದ ಬಾಬು ವ್ಯವಸ್ಥಿತವಾಗಿ ಸಂಚು ರೂಪಿಸಿ ಚೈತ್ರಾ, ಗಗನ್‌ ಕಡೂರು, ಹಾಗೂ ಹಾಲಶ್ರೀ ಸ್ವಾಮೀಜಿ ಅವರು ಮೋಸ ಮಾಡಿದ್ದಾರೆ. ನಾನು ಬ್ಯಾಂಕಿಂದ 10 ಕೋಟಿ ರೂಪಾಯಿ ಲೋನ್ ಪಡೆದು ನಗದು ಹಾಗೂ ಡಿಡಿ ರೂಪದಲ್ಲಿ ಹಣ ನೀಡಿದ್ದೇನೆ. ವಂಚನೆಯ ಹಿಂದೆ ದೊಡ್ಡ ನಾಯಕರಿಲ್ಲ. ಇಂದಿರಾ ಕ್ಯಾಂಟೀನ್ ವ್ಯವಹಾರಕ್ಕೂ ವಂಚನೆಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಿಸಿಬಿಗೆ ಎಲ್ಲಾ ರೀತಿಯ ಮಾಹಿತಿ ಹಾಗೂ ಅಗತ್ಯ ದಾಖಲೆ ನೀಡಿದ್ದೇನೆ. ನೋಟಿಸ್ ಕೊಟ್ಟು ವಿಚಾರಣೆಗೆ ಕರೆದರೆ ಸಿಸಿಬಿ ಮುಂದೆ ಹಾಜರಾಗುವೆ ಎಂದಿದ್ದಾರೆ.

RELATED TOPICS:
English summary :Supplying food to Indira Canteen under the company Chef Talk, statement of Chaitra Kundapur Spotaka.

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ
ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ
 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...