Fri,Feb14,2025
ಕನ್ನಡ / English

ಕಾವೇರಿ ನೀರು ಬಿಡಲು ನಮ್ಮಲ್ಲಿ ನೀರೇ ಇಲ್ಲ - ಸಿಎಂ ಸಿದ್ದರಾಮಯ್ಯ | JANATA NEWS

20 Sep 2023
1587

ಬೆಂಗಳೂರು : ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು. ಸಂಕಷ್ಟ ಸೂತ್ರ ಸಿದ್ಧವಾಗದೇ ಇರುವುದರಿಂದ ಕಾವೇರಿ ನೀರು ಹಂಚಿಕೆ ಎನ್ನುವುದು ನಮ್ಮ ರಾಜ್ಯಕ್ಕೆ ಕ್ಲಿಷ್ಟಕರವಾಗಿ ಪರಿಣಮಿಸಿದೆ. ನೀರು ಬಿಡಬಾರದು ಎನ್ನುವ ಪ್ರಶ್ನೆ ಅಲ್ಲ. ಬಿಡಲು ನಮ್ಮಲ್ಲಿ ನೀರೇ ಇಲ್ಲ, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ನಡೆಯುತ್ತಿರುವ ಕೇಂದ್ರ ಸಚಿವರು, ಸರ್ವ ಪಕ್ಷದ ಸಂಸತ್ ಸದಸ್ಯರ ಸಭೆಯಲ್ಲಿ ಮುಖ್ಯಮಂತ್ರಿ
ಸಿದ್ದರಾಮಯ್ಯ ಮಾತನಾಡುತ್ತಿದ್ದರು.

ಕುಡಿಯುವ ನೀರಿಗೆ 33 ಟಿಎಂಸಿ, ಬೆಳೆ ರಕ್ಷಣೆಗೆ 70 ಟಿಎಂಸಿ, ಕೈಗಾರಿಕೆಗಳಿಗೆ 3 ಟಿಎಂಸಿ ಸೇರಿ ಒಟ್ಟು 106 ಟಿಎಂಸಿ ನೀರು ನಮಗೆ ಅನಿವಾರ್ಯವಾಗಿ ಬೇಕಿದೆ. ಈಗ ನಮ್ಮ ಬಳಿ ಇರುವುದು 53 ಟಿಎಂಸಿ ನೀರು ಮಾತ್ರ. ಹೀಗಾಗಿ ತಮಿಳುನಾಡಿಗೆ ಬಿಡಲು ನೀರೇ ಇಲ್ಲ. ನಮಗೆ ಆಗಸ್ಟ್ ಬಳಿಕ ಮಳೆ ಬರಲ್ಲ. ತಮಿಳುನಾಡಿಗೆ ಆಗಸ್ಟ್ ಬಳಿಕ ಮಳೆ ಬರುತ್ತದೆ. ಅಲ್ಲಿ ಅಂತರ್ಜಲ ಕೂಡ ಹೆಚ್ಚಿದೆ. ಆದ್ದರಿಂದ ನಾವು ಹೆಚ್ಚು ಸಂಕಷ್ಟದಲ್ಲಿದ್ದೇವೆ.

ವಾಸ್ತವ ಪರಿಸ್ಥಿತಿಯನ್ನು ನಮ್ಮ ಕಾನೂನು ತಂಡ ಮತ್ತು ತಜ್ಞರು ಹಾಗೂ ಅಧಿಕಾರಿಗಳ ತಂಡ CWMC ಎದುರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ 108.4 ಟಿಎಂಸಿ ನೀರನ್ನು ನಾವು ಬಿಡಬೇಕಿತ್ತು. ಆದರೆ ನಾವು ಬಿಟ್ಟಿರುವುದು 39.8 ಟಿಎಂಸಿ ನೀರು ಮಾತ್ರ. ಇಂಥಾ ಪರಿಸ್ಥಿತಿ ಎದುರಾದಾಗ ಸಮರ್ಥವಾಗಿ ಜನರ ಹಿತ ಕಾಪಾಡಲು ಮೇಕೆದಾಟು ನಮಗೆ ಅನಿವಾರ್ಯ. ಆದ್ದರಿಂದ ನಮ್ಮ ನೀರನ್ನು, ನಮ್ಮ ಜಾಗದಲ್ಲಿ ಬಳಸಿಕೊಳ್ಳಲು, ಸಂಗ್ರಹಿಸಿಕೊಳ್ಳಲು, ವಿದ್ಯುತ್ ಉತ್ಪಾದಿಸಿಕೊಳ್ಳಲು ಮೇಕೆದಾಟು ನಮಗೆ ಅಗತ್ಯವಿದೆ. ಮುಂದಿನ ದಿನಗಳಲ್ಲಿ ಇಂಥಾ ಪರಿಸ್ಥಿತಿಗೆ ಮೇಕೆದಾಟು ಪರಿಹಾರ ಆಗುತ್ತದೆ.

ಈಗಾಗಲೇ ನಾವು ಕೇಂದ್ರ ನೀರಾವರಿ ಸಚಿವರಿಗೆ ಎರಡು ಬಾರಿ ಪತ್ರ ಬರೆದು ಪರಿಸ್ಥಿತಿಯನ್ನು ಸಮಗ್ರವಾಗಿ ವಿವರಿಸಿದ್ದೇವೆ. ಸರ್ವಪಕ್ಷ ನಿಯೋಗದೊಂದಿಗೆ ಭೇಟಿ ಮಾಡಲು ಕೇಂದ್ರದ ಜಲ ಶಕ್ತಿ ಸಚಿವರು ಹಾಗೂ ಪ್ರಧಾನಿ ಅವರ ಸಮಯ ಕೇಳಿದ್ದೇವೆ. ಹೀಗಾಗಿ ಮುಂದೆ ನಾವು ಇಡಬೇಕಾದ ಹೆಜ್ಜೆಗಳ ಕುರಿತು ವೈಜ್ಞಾನಿಕ ಸಂಗತಿಗಳ ಆಧಾರದಲ್ಲಿ ಚರ್ಚಿಸಬೇಕು, ಎಂದಿದ್ದಾರೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿತ್ತು, ಆದರೆ ರಾಜ್ಯದಲ್ಲಿ ತೀವ್ರ ಬರಗಾಲವಿದೆ ಎಂಬ ಕಾರಣಕ್ಕೆ ಕರ್ನಾಟಕ ನಿರಾಕರಿಸಿದೆ.

ಒಟ್ಟು 12,500 ಕ್ಯೂಸೆಕ್ ನೀರು ಬಿಡುವಂತೆ ತಮಿಳುನಾಡು ಒತ್ತಾಯಿಸಿದೆ. ಎರಡೂ ಕಡೆಯವರು ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುತ್ತಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಪ್ರಧಾನಿ, ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ದೇವೇಗೌಡ, ಕರ್ನಾಟಕ ಮತ್ತು ತಮಿಳುನಾಡು ನಡುವಿನ ಜಗಳ ಕಾನೂನಾತ್ಮಕವಾಗಿ ಬಗೆಹರಿಯುವುದಿಲ್ಲ, ಎರಡೂ ಕಡೆಯವರು ಒಟ್ಟಾಗಿ ಕುಳಿತ ನಂತರವೇ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.

English summary : We have no water to release Cauvery water - CM Siddaramaiah

ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಸಾರ್ವಜನಿಕ ಸಾರಿಗೆ ಬಳಕೆ ಹೆಚ್ಚಳಕ್ಕೆ ಸಹಾಯಕಾರಿಯಾಗಿದ್ದ ನಮ್ಮ ಮೆಟ್ರೊ ದರ 50% ಹೆಚ್ಚಳ : ಹಿಂಪಡೆಯಲು ಆರ್. ಅಶೋಕ ಒತ್ತಾಯ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಕೇಶವ ಫೌಂಡೇಷನ್ ಅಧಿಕೃತ ವೆಬ್ಸೈಟ್ ಲೋಕಾರ್ಪಣೆ ಮಾಡಿದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ಮಹಾ ಕುಂಭಮೇಳ : ಸಂಗಮದಲ್ಲಿ ತೀರ್ಥಸ್ನಾನ ಮಾಡಿದ ಕೇಂದ್ರ ರಾಜ್ಯ ಸಚಿವ ವಿ.ಸೋಮಣ್ಣ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ದೊಡ್ಡ ಯಶಸ್ಸು : 1 ಕೋಟಿ ರೂ. ಬಹುಮಾನ ಹೊತ್ತಿದ್ದ ಮಾವೋವಾದಿ ಜೊತೆ 20 ಮಾವೋವಾದಿಗಳು ತಟಸ್ಥ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ  ಸೆಷನ್ಸ್ ನ್ಯಾಯಾಲಯ
ಆರ್‌ಜಿ ಕರ್ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಪ್ರಮುಖ ಆರೋಪಿಗೆ ಜೀವಾವಧಿ ಶಿಕ್ಷೆ ಸೆಷನ್ಸ್ ನ್ಯಾಯಾಲಯ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಇಸ್ರೋ ಸ್ಪೇಡೆಕ್ಸ್ ಡಾಕಿಂಗ್ ಮಿಷನ್‌ ಯಶಸ್ವಿ : ಈ ಸಾಮರ್ಥ್ಯ ಹೊಂದಿರುವ ವಿಶ್ವದ ನಾಲ್ಕನೇ ರಾಷ್ಟ್ರ ಭಾರತ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಮನೆಯಲ್ಲಿ ನಿಮ್ಮ ಹೆಂಡತಿಯನ್ನು ನೀವು ಎಷ್ಟು ಹೊತ್ತು ನೋಡಬಹುದು? ಆಫೀಸಿಗೆ ಹೋಗಿ ಕೆಲಸ ಮಾಡು - ಎಲ್ ಅಂಡ್ ಟಿ ಅಧ್ಯಕ್ಷ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ ಭಾರತ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಚಿನ್ನದ ಹಾಲ್‌ಮಾರ್ಕ್‌ನಂತೆಯೇ ಶೀಘ್ರದಲ್ಲೇ ಬೆಳ್ಳಿಗೆ ಹಾಲ್‌ಮಾರ್ಕಿಂಗ್ - ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಅಮೆರಿಕದಲ್ಲಿ ಭಯೋತ್ಪಾದಕ ದಾಳಿ : ಭಯೋತ್ಪಾದನೆಯ ವಿರುದ್ಧದ ಹೋರಾಟದಲ್ಲಿ ಒಗ್ಗಟ್ಟಾಗಿ ನಿಲ್ಲಬೇಕು - ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ :  ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ : ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನ : ನೀಲಿ ಪೇಟದ ಸರ್ದಾರ್ ರಹಸ್ಯ

ನ್ಯೂಸ್ MORE NEWS...