ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ | JANATA NEWS
ಬೆಂಗಳೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿಯಿಂದ ಕೋಟ್ಯಂತರ ರೂಪಾಯಿ ಪಡೆದು ವಂಚಿಸಿದ್ದಾರೆ ಎಂಬ ಆರೋಪದ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಮತ್ತು ಇತರೆ ಆರು ಮಂದಿ ಆರೋಪಿಗಳನ್ನು ಅಕ್ಟೋಬರ್ 6ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 3ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿಗಳಾದ ಚೈತ್ರಾ, ಗಗನ್, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್ ಹಾಗೂ ಚೆನ್ನಾ ನಾಯ್ಕ್ ಕಸ್ಟಡಿ ಅವಧಿ ಇಂದು ಅಂತ್ಯವಾದ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ನ್ಯಾಯಾಲಯದ ಮುಂದೆ ಆರೋಪಿಗಳನ್ನು ಹಾಜರು ಪಡಿಸಿದ್ದರು. ಸಿಸಿಬಿ ತನಿಖೆಗೆ ಮತ್ತೆ ಅವಶ್ಯಕತೆ ಇಲ್ಲವೆಂದು ತನಿಖಾಧಿಕಾರಿ ಸ್ಪಷ್ಟಪಡಿಸಿದ ಕಾರಣ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ. ಆರೋಪಿಗಳ ಪರ ವಕೀಲರು ಸಲ್ಲಿಸಿರುವ ಜಾಮೀನು ಅರ್ಜಿಗೆ ಸೆಪ್ಟೆಂಬರ್ 26 ರಂದು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ.
ಚೈತ್ರಾ ಹಾಗೂ ಇತರ ಆರೋಪಿಗಳನ್ನು ಇಂದು ಕೆಎಸ್ಆರ್ಪಿ ಬಸ್ನಲ್ಲಿ ಪೊಲೀಸರು ಪರಪ್ಪನ ಅಗ್ರಹಾರದಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಕರೆದುಕೊಂಡು ಬಂದಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿದ್ದಾಗಿ ಪೂಜಾರಿ ದೂರು ನೀಡಿದ್ದರು.