ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್ | JANATA NEWS

ಬೆಂಗಳೂರು : ಕಾವೇರಿ' ಬಂದ್ ಗೆ ಜೆಡಿಎಸ್-ಬಿಜೆಪಿ ಬೆಂಬಲ ಇನ್ನು ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಬೆಂಬಲ ಘೋಷಣೆ ಮಾಡಿದ್ದು, ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾರು ಪ್ರತಿಭಟನೆ ಮಾಡಬಾರದು ಅಂತ ಇಲ್ಲ. ಎಲ್ಲಾ ಅವರವರ ವಿಚಾರ ಇಟ್ಕೊಂಡು ಪ್ರತಿಭಟನೆ ಮಾಡ್ತಾರೆ. ಒಳಗಡೆ ಬಂದಾಗ ರಾಜ್ಯದ ಹಿತಾಸಕ್ತಿ, ಹೊರಗಡೆ ಹೋದಾಗ ರಾಜಕಾರಣ ನಡೆಯುತ್ತಿದೆ. ನೀರಿನಲ್ಲಿ ರಾಜಕಾರಣ ಮಾಡಬೇಕು ಅಂತ ಹೊರಟಿದ್ದಾರೆ. ನೀರಿನಿಂದ ಜನರನ್ನ ಬದುಕಿಸಬೇಕು ಅಂತ ನಾವು ಹೊರಟಿದ್ದೇವೆ ಎಂದು ಹೇಳಿದರು.
ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿ ಕಾಪಾಡಲು ಸರ್ಕಾರ ಕಟಿಬದ್ಧವಾಗಿದೆ. ಕರ್ನಾಟಕದ ರೈತರ ಹಿತ ಕಾಪಾಡಲು ನಾವಿದ್ದೇವೆ, ಯಾರೂ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದ್ದೇವೆ. ಯಾವುದೇ 'ಬಂದ್' ಮಾಡಬೇಡಿ ಎಂದು ನಾನು ಅವರಿಗೆ ಮನವಿ ಮಾಡುತ್ತೇನೆ.. .ಕರ್ನಾಟಕದ ಹಿತಾಸಕ್ತಿಯನ್ನು ಬೆಂಬಲಿಸಲು ನಾವಿದ್ದೇವೆ. ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಹೇಳಿದರು.
ನೀರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ, ಅಂಕಿ ಅಂಶ ಹೇಳಿದರೆ ರಾಜ್ಯದ ಹಿತಕ್ಕೆ ಧಕ್ಕೆ ಆಗುತ್ತದೆ. ದೇವೇಗೌಡರು ಹಿರಿಯ ಮುಖಂಡರು, ಅವರು ಹಿಂದೆ ಕೊಟ್ಟ ಒಂದು ಸಂದರ್ಶನ ತೆಗೆದು ನೋಡಲಿ ಗೊತ್ತಾಗುತ್ತದೆ. ಕುಮಾರಸ್ವಾಮಿ ಅವರೇನೋ ಮಾತಾಡಿದ್ದಾರೆ ಅಮಿತ್ ಶಾ ಜೊತೆ, ಸೂಕ್ಷ್ಮ ವಾಗಿ ಮಾತಾಡಿದ್ದೇವೆ ಅಂತ ಹೇಳಿದ್ದಾರೆ. ಅದೇನೇನು ನುಡಿಮುತ್ತು ಆಡಿದಾರೆ ಏನು ಅಂತ ಹೇಳಲಿ. ನಾವು ಮೂರ್ಖರೇ, ಆದರೆ ನಾವು ರೈತರ ಹಿತ ಕಾಪಾಡಲು ನಿಂತಿದ್ದೇವೆ. ಬೆಂಗಳೂರು ಬಂದ್ ಮಾಡೋದು ಬೇಡ, ಯಾವ ಲಾಭಕ್ಕಾಗಿ ಬಂದ್ ಮಾಡ್ತಾರೆ. ಸರ್ಕಾರವೇ ಹೋರಾಟಕ್ಕೆ ನಿಂತಿದೆ. ಬಂದ್ ಮಾಡೋದ್ರಿಂದ ಯಾವುದೇ ಅನುಕೂಲ ಇಲ್ಲ.