Wed,Apr17,2024
ಕನ್ನಡ / English

ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ | JANATA NEWS

24 Sep 2023
1461

ಬೆಂಗಳೂರು : ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಎಚ್. ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯ ಮೂಲಕ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಆಕ್ರೋಶ ಹೊರ ಹಾಕಿದ್ದಾರೆ.

ಈ ಕುರಿತಾಗಿ ಸರಣಿ ಟ್ವೀಟ್​ ಮಾಡಿರುವ ಅವರು, ನಾನು ಅಪಾರವಾಗಿ ಗೌರವಿಸುವ ಮಾಜಿ ಪ್ರಧಾನಿ ಹೆಚ್​ಡಿ. ದೇವೇಗೌಡರು ಕೋಮುವಾದಿ ಬಿಜೆಪಿ ವಿರುದ್ಧ ಹೋರಾಟ ಮಾಡಿಕೊಂಡು ಬಂದವರು. ಆದರೆ ಕುಮಾರಸ್ವಾಮಿ ತಮ್ಮ ಸ್ವಾರ್ಥ ರಾಜಕಾರಣಕ್ಕೆ ಗೌಡರು ನಂಬಿ, ಪಾಲಿಸಿಕೊಂಡು ಬಂದ ತತ್ವ ಸಿದ್ಧಾಂತವನ್ನು ಬಲಿ ಕೊಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಸ್ಲಿಂ ಸಮುದಾಯದ ಜತೆ ನಾನು ನಿಂತಿದ್ದೆ ಆದರೆ ಆ ಸಮುದಾಯ ಜೆಡಿಎಸ್ ಜತೆ ನಿಲ್ಲಲಿಲ್ಲ ಎಂದು ಹೇಳುವ ಹೆಚ್​ಡಿ. ಕುಮಾರಸ್ವಾಮಿ ಅವರು ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದಾರೆ? ತಮ್ಮ ಹೇಳಿಕೆಯಿಂದ ನಾಡಿನ ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚನ್ನಪಟ್ಟಣದಲ್ಲಿ ಮುಸ್ಲಿಂ ಸಮುದಾಯ ಮತ ನೀಡಿರದಿದ್ದರೆ ಅವರು ಗೆಲ್ಲುತ್ತಿದ್ದರೆ ಎಂಬುದನ್ನು ಎದೆ ಮುಟ್ಟಿಕೊಂಡು ಹೇಳಲಿ. ಹೊಳೆ ನರಸೀಪುರದಲ್ಲಿ ಎಚ್ ಡಿ ರೇವಣ್ಣ, ತುರುವೇಕೆರೆ ಕೃಷ್ಣಪ್ಪ, ಚಿಕ್ಕ ನಾಯಕನಹಳ್ಳಿ ಸುರೇಶ್ ಬಾಬು, ಗುರುಮಿಠಕಲ್ ನಾಗನಗೌಡ ಕಂದಕೂರು, ದೇವದುರ್ಗ ಕರೆಮ್ಮ, ಚನ್ನರಾಯಪಟ್ಟಣ ಬಾಲಕೃಷ್ಣ ಇವರೆಲ್ಲ ಮುಸ್ಲಿಂ ಸಮುದಾಯ ನಮಗೆ ಮತ ಹಾಕಿಲ್ಲ ಎಂದು ಹೇಳಲಿ ನೋಡೋಣ ಎಂದು ಸವಾಲು ಹಾಕಿದರು.

ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಅವರು ದೊಡ್ಡ ಅಂತರದಲ್ಲಿ ಗೆಲ್ಲಲಿಲ್ಲ. ಅಲ್ಲಿ ಮುಸ್ಲಿಂ ಸಮುದಾಯ ಒಟ್ಟಾಗಿ ಮತ ಕೊಟ್ಟಿದ್ದಕ್ಕೆ ಗೆದ್ದಿದ್ದು, ಇಲ್ಲದಿದ್ದರೆ ಸೋಲುತ್ತಿದ್ದರು. ಮುಸ್ಲಿಂ ಸಮುದಾಯ ಜೆಡಿಎಸ್ ಗೆ ಮತ ಕೊಟ್ಟಿದ್ದಕ್ಕೆ 19 ಸ್ಥಾನ ಬಂದಿದೆ. ಇಲ್ಲದಿದ್ದರೆ 5 ರಿಂದ ಆರು ಸ್ಥಾನ ಬರುತ್ತಿತ್ತು ಎಂದು ಹೇಳಿದರು.

RELATED TOPICS:
English summary :Whose votes did you win in Channapatnam? Touch your chest and say

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ
ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ ಬಲವರ್ಧನೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ  ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
ದೆಹಲಿ ಅಬಕಾರಿ ನೀತಿ ಹಗರಣ : ದೆಹಲಿ ಸಿಎಂ ಕೇಜ್ರಿವಾಲ್ ಗೆ ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನ
 ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ
ಮಾಜಿ ಉಪಪ್ರಧಾನಿ ಎಲ್‌ಕೆ ಅಡ್ವಾಣಿ ಅವರ ನಿವಾಸದಲ್ಲಿ ಭಾರತ ರತ್ನ ಪ್ರಶಸ್ತಿ ಪ್ರದಾನ

ನ್ಯೂಸ್ MORE NEWS...