Wed,Jun18,2025
ಕನ್ನಡ / English

ತಮಿಳುನಾಡಿಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಮತ್ತೆ ಆದೇಶ, ರೈತರ ಆಕ್ರೋಶ | JANATA NEWS

29 Sep 2023

ಬೆಂಗಳೂರು : ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಶುಕ್ರವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲೂ ಅಕ್ಟೊಬರ್15ರವರೆಗೆ ಪ್ರತಿದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಿದೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಇಂದು ಕನ್ನಡ ಪರ ಸಂಘಟನೆಗಳು ಮತ್ತು ರೈತರು ಸೇರಿದಂತೆ ಹಲವಾರು ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು. ತಮಿಳುನಾಡಿಗೆ ನೀರು ಹರಿಸದಂತೆ ಒತ್ತಾಯಿಸಿ ಒಂದು ವಾರದಲ್ಲಿ ನಡೆದ ಎರಡನೇ ಬಂದ್ ಇದಾಗಿದೆ.

ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಬೇಕೆಂದು ಮಂಗಳವಾರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸುವಂತೆ ಸಿಡಬ್ಲ್ಯುಎಂಎ ಸೂಚನೆ ನೀಡಿದೆ.

ಸರ್ಕಾರ ಈ ವಿಚಾರವಾಗಿ ಮಾತನಾಡಬೇಕು. ಸಂಜೆ ಆರು ಗಂಟೆ ಒಳಗೆ ನಿಮ್ಮ ಅಭಿಪ್ರಾಯವನ್ನ ಸರ್ಕಾರ ತಿಳಿಸಬೇಕು. ಇಲ್ಲವಾದರೇ ಹೋರಾಟದ ರೂಪ ಬದಲಾಗುತ್ತದೆ ಎಂದು ರೈತರು ಆಕ್ರೋಶ ಹೊರಹಾಕಿದ್ದು, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕಾರ್ಯಕರ್ತರು ಬೆಂಗಳೂರು ಮೈಸೂರು ಹೆದ್ದಾರಿ ತಡೆದು ಪ್ರತಿಭಟಿಸಿದರು.

ಜೂನ್​ನಿಂದ ಸೆಪ್ಟೆಂಬರ್​ವರೆಗೆ ಕರ್ನಾಟಕ 123 ಟಿಎಂಸಿ ನೀರು ಹರಿಸಬೇಕಿತ್ತು. ಆದರೆ, ಈವರೆಗೆ ಕೇವಲ 40 ಟಿಎಂಸಿ ನೀರು ಮಾತ್ರ ಹರಿಸಿದೆ. ಬಾಕಿ 83 ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಸೂಚಿಸಬೇಕು ಎಂದು ಸಿಡಬ್ಲ್ಯುಎಂಎ ಸಭೆಯಲ್ಲಿ ತಮಿಳುನಾಡು ಸರ್ಕಾರದ ಪರ ಅಧಿಕಾರಿಗಳು ವಾದ ಮಂಡನೆ ಮಾಡಿದರು.

ತಮಿಳುನಾಡು, ಕರ್ನಾಟಕ, ಕೇರಳ ಪುದುಚೇರಿಯ ಅಧಿಕಾರಿಗಳು ಇದರಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸನ್ನು ಪರಿಶೀಲಿಸಿ ಅ.15ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಬಂದಿದೆ.

ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಎಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಿದ ಕನ್ನಡ ಪರ ಸಂಘಟನೆಗಳು ರಾಜ್ಯದಂತ ಪ್ರತಿಭಟನೆ ಮತ್ತು ಹೋರಾಟ ನಡೆಸುತ್ತಿದ್ದು ಕರ್ನಾಟಕ ಬಂದ್ ಬಹುತೇಕ ಯಶಸ್ವಿಯಾಗಿ ನಡೆಯುತ್ತಿದೆ.

English summary :Again the order to release 3000 cusecs of water to Tamilnadu every day, farmers are outraged

ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಭಾರತ ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಎಂದಿಗೂ ಒಪ್ಪಿಕೊಂಡಿಲ್ಲ ಮತ್ತು ಎಂದಿಗೂ ಸ್ವೀಕರಿಸುವುದಿಲ್ಲ - ಅಧ್ಯಕ್ಷ ಟ್ರಂಪ್ ಗೆ ತಿಳಿಸಿ ಹೇಳಿದ ಪ್ರಧಾನಿ ಮೋದಿ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ : ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನಿಂದ ಸ್ಥಳಾಂತರಿಸಿದ ಭಾರತ ಸರ್ಕಾರ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
G7 ಶೃಂಗಸಭೆಯಲ್ಲಿ ಭಾಗವಹಿಸಲು ದಶಕದ ನಂತರ ಕೆನಡಾಕ್ಕೆ ಆಗಮಿಸಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಪ್ರಧಾನಿ ಮೋದಿಗೆ ಸೈಪ್ರಸ್‌ನ ಅತ್ಯುನ್ನತ ನಾಗರಿಕ ಗೌರವ - ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಮಕರಿಯೋಸ್ III ಪ್ರಶಸ್ತಿ ಪ್ರದಾನ
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೆಹಲಿಯ ಆಸ್ಪತ್ರೆಗೆ ದಾಖಲು
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಮತ್ತೊಂದು ಬೋಯಿಂಗ್ 787 ತಾಂತ್ರಿಕ ಸಮಸ್ಯೆ : ಚೆನ್ನೈಗೆ ಹೊರಟಿದ್ದ ಬ್ರಿಟಿಷ್ ಏರ್‌ವೇಸ್ ವಿಮಾನ ಲಂಡನ್ ಗೆ ವಾಪಸ್
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಇರಾನ್ ಮೇಲೆ ಇಸ್ರೇಲ್ ನಡೆಸಿದ ಇತ್ತೀಚಿನ ದಾಳಿಗಳನ್ನು ಖಂಡಿಸಿ ಎಸ್.ಸಿ.ಓ ಹೇಳಿಕೆಯಿಂದ ದೂರ ಉಳಿದ ಭಾರತ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಏರ್ ಇಂಡಿಯಾ ಬೋಯಿಂಗ್ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ : ತನಿಖೆಗಾಗಿ ಕೇಂದ್ರದಿಂದ ಉನ್ನತ ಮಟ್ಟದ ಸಮಿತಿ ರಚನೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಅಹಮದಾಬಾದ್‌ನಲ್ಲಿ ಟೇಕ್ ಆಫ್ ಆಗುತ್ತಿದ್ದಾಗ ಏರ್ ಇಂಡಿಯಾ B787 ವಿಮಾನ ಪತನ : ಭಾರಿ ಸಾವುನೋವು ಸಾಧ್ಯತೆ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಜಾತಿಗಣತಿ ನೆಪದಲ್ಲಿ ಸಿದ್ದರಾಮಯ್ಯ ₹165 ಕೋಟಿ ದುರುಪಯೋಗ ಮಾಡಿದ್ದಾರೆ - ಸುನೀಲಕುಮಾರ
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಹಿಂದಿ ಕಲಿಯುವುದರಿಂದ ಉತ್ತರ ರಾಜ್ಯಗಳಲ್ಲಿ ಜನರಿಗೆ ಹೆಚ್ಚಿನ ಅನುಕೂಲ ಮತ್ತು ಅವಕಾಶ ಸಾಧ್ಯ - ಸಿಎಂ ಚಂದ್ರಬಾಬು ನಾಯ್ಡು
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ
ಆಪರೇಷನ್ ಸಿಂಧೂರ್ : ವಿವಿಧ ದೇಶಗಳಿಗೆ ಭೇಟಿ ನೀಡಿದ ವಿವಿಧ ನಿಯೋಗಗಳ ಸದಸ್ಯರ ಆತಿಥ್ಯ ವಹಿಸಿದ ಪ್ರಧಾನಿ ಮೋದಿ

ನ್ಯೂಸ್ MORE NEWS...