ವಾಸ್ತಾಂಶ ಮುಂದಿಟ್ಟರೂ ಹಿನ್ನಡೆಯಾಗುತ್ತಿದೆ: ಸಿದ್ದರಾಮಯ್ಯ | JANATA NEWS

ಬೆಂಗಳೂರು : ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿ ದಿನ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.
ವಿಧಾನಸೌಧದಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾವು ನಮ್ಮ ಎಲ್ಲ ವಾಸ್ತವ ಅಂಶಗಳನ್ನ ಸಿಡಬ್ಲ್ಯೂಆರ್‌ಸಿ, ಸಿಡಬ್ಲ್ಯೂಎಂಎ ಹಾಗೂ ಸುಪ್ರೀಂ ಕೋರ್ಟ್ ಮುಂದಿಟ್ಟಿದ್ದೇವೆ. ಆದರೂ ನಮಗೆ ನ್ಯಾಯ ಸಿಗುತ್ತಿಲ್ಲ. ಇಂದಿನ ಸಭೆಯ ಬಳಿಕ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇಂದು ಸಿಡಬ್ಲ್ಯೂಎಂಎ ಸಭೆ ಇತ್ತು. ನಾವು ಇದರ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನೆ ಮಾಡಲು ಸಾಧ್ಯವಾ ಅಂತಾ ಕಾನೂನು ತಜ್ಞರ ತಂಡದ ಜೊತೆ ಕೇಳಿದ್ದೇನೆ. ಇಂದು ಸುಪ್ರೀಂ ಕೋರ್ಟ್ ನಿವೃತ್ತ ಜಡ್ಜ್ಗಳ ಜೊತೆ ಸಭೆ ಕರೆದಿದ್ದೇನೆ ಎಂದರು.
ಸಿಡಬ್ಲ್ಯೂಎಂಎ, ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ಕರ್ನಾಟಕಕ್ಕೆ ಪದೇಪದೆ ಹಿನ್ನಡೆಯಾಗುತ್ತಿರುವ ಹಿನ್ನೆಲೆ ಸಿದ್ದರಾಮಯ್ಯ ಅವರು ಇಂದು ಸಂಜೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಕಾನೂನು ತಜ್ಞರ ಸಭೆ ಕರೆದಿದ್ದಾರೆ. ಸುಪ್ರೀಂಕೋರ್ಟ್, ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳು ಸಭೆಯಲ್ಲಿ ಭಾಗಿಯಾಗಲಿದ್ದು, ನಿವೃತ್ತ ನ್ಯಾಯಮೂರ್ತಿಗಳಾದ ಹೆಚ್.ಎಲ್.ದತ್ತು, ಗೋಪಾಲಗೌಡ, ರವೀಂದ್ರಬಾಬು, ರಾಜೇಂದ್ರಬಾಬು, ಎಂ.ಎನ್.ವೆಂಕಟಾಚಲಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ.