ಓವರ್ ಟೇಕ್ ಮಾಡೋ ವೇಳೆ ಬಿಎಂಟಿಸಿ ಬಸ್ ಬೈಕ್ ಡಿಕ್ಕಿ, ಬಸ್ ಹರಿದು ಸಾವು | JANATA NEWS
ಬೆಂಗಳೂರು : ಓವರ್ ಟೇಕ್ ಮಾಡುವ ವೇಳೆ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸ್ಕೂಟರ್ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಭರತ್ ರೆಡ್ಡಿ ಎಂಬಾತನಿಗೆ ಓವರ್ ಟೇಕ್ ವೇಳೆ ಬಸ್ ಡಿಕ್ಕಿ ಹೊಡೆದು ಕೆಳಗೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್ ಹರಿದಿದೆ. ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಭರತ್ ಇಂಜಿನಿಯರಿಂಗ್ ಮುಗಿಸಿ ಸಿವಿಲ್ ಕಾಂಟ್ರಾಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎಂಬ ಎನ್ನಲಾಗಿದೆ.
ವೇಗವಾಗಿ ಬಂದು ಬಸ್ ಪಕ್ಕದ ಸಣ್ಣ ಜಾಗದಲ್ಲಿ ಓವರ್ ಟೇಕ್ ಮಾಡಲು ಬೈಕ್ ಸವಾರ ಯತ್ನಿಸಿದ್ದಾನೆ ಈ ವೇಳೆ, ಬಸ್ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಆಗ ಸವಾರನ ಮೇಲೆ ಬಸ್ ಹರಿದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂಧ ಯಲಹಂಕ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.